ಉಪ್ಪಿನಂಗಡಿ (ದಕ್ಷಿಣ ಕನ್ನಡ): ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪದಲ್ಲಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂನ್ 14ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡಿದ್ದ ಆರೋಪಿ, ಫೋನ್ ಮೂಲಕ ಸಂಪರ್ಕ ಸಾಧಿಸಿ ಆತ್ಮೀಯತೆ ಬೆಳೆಸಿದ್ದ. ಜುಲೈ 21ರಂದು ಆಕೆಯನ್ನು ನೆಲ್ಯಾಡಿಗೆ ಬರಲು ಹೇಳಿದ್ದ. ಅಲ್ಲಿಂದ ಆಕೆಯನ್ನು ಪಿಕಪ್ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.