ಮಂಗಳೂರು: ಈಜು ಫೆಡರೇಷನ್, ಅಕಾಡೆಮಿಗಳಿಗೆ ಎಮ್ಮೆಕೆರೆ ಈಜುಕೊಳದಲ್ಲಿ ಕಾರ್ಯಕ್ರಮ ಆಯೋಜಿಸುವ ಜವಾಬ್ದಾರಿ ನೀಡಿ, ಸ್ಥಳೀಯ ಮತ್ತು ರಾಷ್ಟ್ರ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಮಂಗಳವಾರ ಇಲ್ಲಿ ನಡೆದ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಈ ರೀತಿ ವ್ಯವಸ್ಥೆಗೊಳಿಸುವುದರಿಂದ ಈಜುಕೊಳವು ಸಮರ್ಪಕವಾಗಿ ಬಳಕೆಯಾಗುತ್ತದೆ. ಜನಮನ್ನಣೆ ಗಳಿಸುವ ಜೊತೆಗೆ ಹೆಚ್ಚು ಆದಾಯ ಪಡೆಯಬಹುದು ಎಂದರು.

ಕದ್ರಿ ಪಾರ್ಕ್ ಆವರಣದಲ್ಲಿ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ದಿದ್ದು, ಫುಡ್ ಕೋರ್ಟ್ಗೆ ಪ್ರತ್ಯೇಕ ಘಟಕ ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಕದ್ರಿ ಉದ್ಯಾನ, ಜಿಂಕೆವನ, ಪಾರ್ಕ್ ರಸ್ತೆಗಳನ್ನು ಏಕೀಕೃತವಾಗಿ ನಿರ್ವಹಣೆ ಮಾಡಲು ಗುತ್ತಿಗೆ ನೀಡುವ ಬಗ್ಗೆ ಪರಿಶೀಲಿಸಲು ಜಿಲ್ಲಾಧಿಕಾರಿ ಸೂಚಿಸಿದರು.

ಮೀನುಗಾರಿಕಾ ಕಾಲೇಜಿನಲ್ಲಿ ನಿರ್ಮಿಸಿರುವ ಕೌಶಲ ತರಬೇತಿ ಕೇಂದ್ರದಲ್ಲಿ ಕೌಶಲ ಅಭಿವೃದ್ಧಿ ತರಬೇತಿಗಳನ್ನು ಫೆಬ್ರುವರಿಯಿಂದ ಆರಂಭಿಸಲು ವೇಳಾಪಟ್ಟಿ ತಯಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಜಲಾಭಿಮುಖ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿ ಜಮೀನು ಸಮಸ್ಯೆಯನ್ನು ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಬಂದರು ಇಲಾಖೆಯ ಭೂಮಿ ಹಸ್ತಾಂತರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ರಾಷ್ಟ್ರ ಧ್ವಜ ಸ್ತಂಭವನ್ನು ನಿರ್ಮಾಣ ಸ್ಥಳ ಅಂತಿಮಗೊಳಿಸಿ ಸರಿಯಾದ ಯೋಜನೆಯನ್ನು ರೂಪಿಸುವಂತೆ ಸಲಹೆ ನೀಡಿದರು. ಸ್ಮಾರ್ಟ್ ಸಿಟಿ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಮಹಾನಗರಪಾಲಿಕೆ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಆಯುಕ್ತ ಆನಂದ್, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣ ಪ್ರಭ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.