ಮಂಗಳೂರು: ಶತಮಾನದ ಹಿಂದೆ ಶಿಕ್ಷಣ ವಂಚಿತರ ಪರವಾಗಿ ಧ್ವನಿ ಎತ್ತಿ ಕ್ರಾಂತಿ ಮಾಡಿದ ವ್ಯಕ್ತಿ ಕುದ್ಮುಲ್ ರಂಗರಾವ್ ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ಶೋಷಿತ ವರ್ಗದ ಜನರಿಗೆ ಸ್ಥಾನ ಮಾನ ಸಿಗಬೇಕು, ಸಮಾನತೆ ದೊರೆಯಬೇಕು ಎಂಬ ಗಾಂಧೀಜಿ ಅವರ ಚಿಂತನೆ ಕುದ್ಮುಲ್ ರಂಗರಾವ್ ಅವರದ್ದೂ ಆಗಿತ್ತು ಎಂದರು.

ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಹರೀಶ್‌ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆನಂದ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.