ಮಂಗಳೂರು: ‘ರಾಜ್ಯದಾದ್ಯಂತ ಪಕ್ಷದ ಬಲವರ್ಧನೆಗೆ ಕಾರ್ಯತಂತ್ರ ರೂಪಿಸಿದ್ದೇನೆ. ಅವಶ್ಯಕತೆ ಇರುವಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಜಿಲ್ಲಾ ಘಟಕ ಹಾಗೂ ಬ್ಲಾಕ್ ಘಟಕಗಳ ಅಧ್ಯಕ್ಷರನ್ನು ತ್ವರಿತವಾಗಿ ಬದಲಾಯಿಸುತ್ತೇವೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ತಿಳಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಕೆಪಿಸಿಸಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಐದು ವಿಭಾಗಗಳಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳ ಪರಾಮರ್ಶೆ ನಡೆಯುತ್ತಿದೆ. ಪಕ್ಷ ಸಂಘಟನೆಗೆ ಬಲ ತುಂಬಬೇಕಾದ ಕಡೆ ಜಿಲ್ಲಾ ಹಾಗೂ ಬ್ಲಾಕ್ ಘಟಕಗಳ ಅಧ್ಯಕ್ಷರ ಬದಲಾವಣೆ ಆಗಲಿದೆ. ಹೊಸಬರಿಗೆ ಹಾಗೂ ಉತ್ಸಾಹಿ ನಾಯಕರಿಗೆ ಅವಕಾಶ ಸಿಗಲಿದೆ. ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಮಿತಿಗಳನ್ನು ರಚಿಸಲಾಗಿದೆ’ ಎಂದು ತಿಳಿಸಿದರು.

‘ಶಿಗ್ಗಾವಿ ಸಂಡೂರು, ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳಲ್ಲಿ ಸದಸ್ಯರ ಆಯ್ಕೆಗೆ ಉಪ ಚುನಾವಣೆ ಶೀಘ್ರವೇ ನಡೆಯಲಿದೆ. ಇಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಹಾಗೂ ಕಾರ್ಯತಂತ್ರ ರೂಪಿಸಲು ಪೂರ್ವಭಾವಿ ಸಭೆಗಳನ್ನು ನಡೆಸಲು ದಿನಾಂಕ ನಿಗದಿಯಾಗಿವೆ. ಶಿಗ್ಗಾವಿಯಲ್ಲಿ 21ಕ್ಕೆ ಹಾಗೂ ಸಂಡೂರಿನಲ್ಲಿ 18ಕ್ಕೆ ಸಭೆ ನಿಗದಿಯಾಗಿದೆ’ ಎಂದು ತಿಳಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿ ಹಾಗೂ ವಸಂತ ಕುಮಾರ್, ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.