ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಕಚೇರಿಗಳಿರುವ ಮೌಲಾನಾ ಆಝಾದ್ ಭವನಕ್ಕೆ ಕಲ್ಲೆಸೆದಿದ್ದ ಪ್ರಕರಣದಲ್ಲಿ ಆರು ಜನರನ್ನು ಪಾಂಡೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರದ ಗೂಡ್ಶೆಡ್ ನಿವಾಸಿ ಧನರಾಜ್ ಶೆಟ್ಟಿ (21), ಎಮ್ಮೆಕೆರೆ ನಿವಾಸಿ ಸುಶಾಂತ್ (20), ಕಂದುಕ ನಿವಾಸಿ ಕಾರ್ತಿಕ್ ಶೆಟ್ಟಿ (26), ಹೊಯ್ಗೆ ಬಝಾರ್ ನಿವಾಸಿಗಳಾದ ಸಾಗರ್ ಬಂಗೇರ (20), ಮನೀಶ್ ಪುತ್ರನ್ (20) ಮತ್ತು ಒಬ್ಬ ಅಪ್ರಾಪ್ತನನ್ನು ಬಂಧಿಸ
ಲಾಗಿದೆ. ಬಾಲಕನಿಗೆ ನ್ಯಾಯಾಲಯ ಜಾಮೀನು ನೀಡಿದೆ. ಉಳಿದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೌಲಾನಾ ಆಝಾದ್ ಭವನಕ್ಕೆ ಆ.13ರಂದು ತಡರಾತ್ರಿ ದುಷ್ಕರ್ಮಿಗಳು ಕಲ್ಲು ತೂರಿದ್ದರು. ಕಟ್ಟಡದಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.