ವಿಟ್ಲ: ಇಲ್ಲಿನ ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಿಂದ ಸೋಮವಾರ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರಿನಲ್ಲಿ ಪತ್ತೆಯಾಗಿದ್ದಾರೆ.

ದೀಕ್ಷಿತ್ (15) ಮತ್ತು ಗಗನ್ (14) ಪತ್ತೆಯಾಗಿರುವ ವಿದ್ಯಾರ್ಥಿಗಳು. ಅವರು ಆ.21ರಂದು ಶಾಲೆಗೆಂದು ವಿದ್ಯಾರ್ಥಿ ನಿಲಯದಿಂದ ತೆರಳಿದವರು ನಾಪತ್ತೆಯಾಗಿದ್ದರು. ಈ ಬಗ್ಗೆ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕಿ ಪ್ರಮೀಳಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ವಿಟ್ಲ ಪೊಲೀಸರು ವಿದ್ಯಾರ್ಥಿಗಳನ್ನು ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ. ಹಾಸ್ಟೆಲ್‌ನಲ್ಲಿ ನಿಲ್ಲಲು ಇಷ್ಟವಾಗದ ಕಾರಣ ದೀಕ್ಷಿತ್ ಮತ್ತು ಗಗನ್ ಮನೆ ಕಡೆಗೆ ಹೊರಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಗೆ ಕರೆ ತಂದ ಪೊಲೀಸರು ಅವರ ಮನವೊಲಿಸಿ ಮತ್ತೆ ಹಾಸ್ಟೆಲ್‌ಗೆ ಕಳುಹಿಸಿಕೊಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.