ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಕುಕ್ಕೆಸುಬ್ರಹ್ಮಣ್ಯ ಸ್ವಾಮಿಗೆ ಮತ್ತು ಉಮಾಮಹೇಶ್ವರನಿಗೆ ಶಿವರಾತ್ರಿ ರಥೋತ್ಸವವು ಭಾನುವಾರ ಸಂಜೆ ನೆರವೇರಿತು. ಪ್ರಥಮವಾಗಿ ಒಂದೇ ಪಲ್ಲಕಿಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಉಮಾಮಹೇಶ್ವರ ದೇವರು ರಥಬೀದಿಗೆ ಬಂದು ರಥಾರೋಹಣರಾದರು. ಶ್ರೀ ದೇವಳದ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ಶ್ರೀ ದೇವರುಗಳಿಗೆ ಪೂಜೆ ಸಲ್ಲಿಸಿದರು. ಬಳಿಕ ತಳಿರು ತೋರಣಗಳಿಂದ ಅಲಂಕೃತವಾದ ಚಿಕ್ಕರಥದಲ್ಲಿ ಶಿವರಾತ್ರಿ ಉತ್ಸವವು ನೆರವೇರಿತು.

ಅವಳಿ ದೇವರುಗಳ ರಥಾರೋಹಣರಾದ ಬಳಿಕ ಭಕ್ತಾಧಿಗಳ ಪರಾಕಿನೊಂದಿಗೆ ಆನೆ, ಬಿರುದಾವಳಿ, ಬ್ಯಾಂಡ್, ನಾದಸ್ವರ, ತವಿಲ್ ನಿನಾದಗಳೊಂದಿಗೆ ಶಿವರಾತ್ರಿ ರಥೋತ್ಸವವು ನೆರವೇರಿತು. ಬಳಿಕ ವಾಸುಕಿ ಛತ್ರದ ಶಿವರಾತ್ರಿ ಕಟ್ಟೆಯಲ್ಲಿ ಕಟ್ಟೆಪೂಜೆ ನಡೆಯಿತು. ಏಕಕಾಲದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಮತ್ತು ಉಮಾಮಹೇಶ್ವರನಿಗೆ ಪೂಜೆ ನೆರವೇರಿತು.

ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶ್ರೀವತ್ಸ ಬೆಂಗಳೂರು, ವನಜಾ.ವಿ.ಭಟ್, ಶೋಭಾ ಗಿರಿಧರ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಇದ್ದರು.

ಕುಕ್ಕೆ ದೇವಳದಲ್ಲಿ ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಶನಿವಾರ ರಾತ್ರಿ ಶಿವರಾತ್ರಿ ಪ್ರಯುಕ್ತ ಕುಕ್ಕೆಸುಬ್ರಹ್ಮಣ್ಯ ದೇವರಿಗೆ ಮತ್ತು ಉಮಾಮಹೇಶ್ವರನಿಗೆ ಜೊತೆಯಾಗಿ ಉತ್ಸವ ನೆರವೇರಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ವೈಧಿಕ ವಿದಿವಿಧಾನ ನೆರವೇರಿಸಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಗರ್ಭಗೃಹದ ಈಶಾನ್ಯಕ್ಕೆ ಇರುವ ಉಮಾಮಹೇಶ್ವರ ಸನ್ನಿಧಿಯಲ್ಲಿ ಮಹಾಶಿವರಾತ್ರಿಯಂದು ಹಗಲು ಏಕದಶರುದ್ರಾಭಿಷೇಕ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.