ಉಳ್ಳಾಲ: ‘ವಾಕ್ ಸ್ವಾತಂತ್ರ್ಯವನ್ನು ಪ್ರತಿಪಾದಿಸಿ ಧರ್ಮದ ವಿಚಾರಧಾರೆಗಳ ಕುರಿತು ಹಿಂದೂ ಸಮಾಜಕ್ಕೆ ಮಾಹಿತಿ ನೀಡಿದ ಉಪನ್ಯಾಸಕನ ವಿರುದ್ಧ ರಾಜ್ಯ ಸರ್ಕಾರ ಪ್ರಕರಣ ದಾಖಲಿಸಿದೆ. ಆದರೆ, ಅಸಾಂವಿಧಾನಿಕವಾಗಿ ಧರ್ಮವನ್ನು ಹಿಯಾಳಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸದೇ ಇರುವುದು ತಾರತಮ್ಯವಲ್ಲವೇ?’ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್ ಹೇಳಿದರು.

ಉಪನ್ಯಾಸಕ ಅರುಣ್ ಉಳ್ಳಾಲ್ ಮಾಡಿದ ಹಿಂದೂ ಧರ್ಮ ಜಾಗೃತಿಯ ಬಾಷಣದ ವಿರುದ್ಧ ದಾಖಲಾಗಿರುವ ಸ್ವಯಂಪ್ರೇರಿತ ಪ್ರಕರಣ ಹಿಂಪಡೆಯಲು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಳ್ಳಾಲ ಪ್ರಖಂಡದ ವತಿಯಿಂದ ತೊಕ್ಕೊಟ್ಟು ಜಂಕ್ಷನ್ನಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

‘ಕಿನ್ಯಾದಲ್ಲಿ ನಡೆದ ನವ ದಂಪತಿ ಸಮಾವೇಶದಲ್ಲಿ ಭಾಗವಹಿಸಿದ್ದ ಅರುಣ್ ಉಳ್ಳಾಲ್, ಹಿಂದೂಗಳು ಹಿಂದೂಗಳ ಸಭಾಂಗಣಗಳಲ್ಲೇ ಮದುವೆಯಾಗಿ ಎಂದು ಸಮಾಜಕ್ಕೆ ಕಿವಿಮಾತು ಹೇಳಿದ್ದಾರೆಯೇ ಹೊರತು ಯಾವುದೇ ಧರ್ಮವನ್ನ ಅಣಕಿಸಿ, ನಿಂದಿಸಿಲ್ಲ. ಧರ್ಮದ ಬಗ್ಗೆ ಜಾಗೃತಿ ಮಾತುಗಳನ್ನಾಡಲೂ ಇಲ್ಲಿ ಸ್ವಾತಂತ್ರ್ಯ ಇಲ್ಲವೇ?. ದೈವ, ದೇವರನ್ನು ಹಿಯಾಳಿಸಿದ ಶಾಲೆಯೊಂದರ ಶಿಕ್ಷಕಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಿಲ್ಲ. ಆದರೆ, ಹಿಂದೂ ಧರ್ಮದ ಬಗ್ಗೆ ಜಾಗೃತಿಯ ಭಾಷಣ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ದಮನಿಸಲಾಗುತ್ತಿದೆ. ಅರುಣ್ ಅವರು ಕೆಲಸ ಮಾಡುತ್ತಿದ್ದ ಮಂಗಳೂರಿನ ಕ್ರೈಸ್ತ ಧರ್ಮೀಯರ ಕಾಲೇಜು ಆಡಳಿತವು ಮೂರು ತಿಂಗಳ ಹಿಂದೆಯೇ ಅವರನ್ನು ಕೆಲಸದಿಂದ ತೆಗೆದಿದ್ದಾರೆ. ಅರುಣ್ ಜತೆಗೆ 12 ಮಂದಿ ಹಿಂದೂ ಉಪನ್ಯಾಸಕರನ್ನು ಕೆಲಸದಿಂದ ತೆಗೆಯುತ್ತಾರೆ. ಈ ಪೈಕಿ ಇಬ್ಬರು ಕಾನೂನು ಹೋರಾಟ ನಡೆಸುತ್ತಿದ್ದಾರೆ’ ಎಂದರು.

ಬಜರಂಗದಳ ಉಳ್ಳಾಲ ನಗರ ಪ್ರಖಂಡ ಸಂಯೋಜಕ ಅರ್ಜುನ್ ಮಾಡೂರು ಮಾತನಾಡಿ, ಯಾವುದೇ ತಪ್ಪು ಮಾಡದ ವಿದ್ಯಾವಂತ ಅರುಣ್ ಉಳ್ಳಾಲ್ ಮೇಲಿನ ಪ್ರಕರಣ ದಾಖಲಿಸಿರುವುದು ಖಂಡನೀಯ. ಉದ್ಯೋಗ ಭದ್ರತೆ ನೀಡುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಅರುಣ್ ಅವರಿಗೆ ವಿಶ್ವಾಸ ನೀಡಿದೆ ಎಂದರು.

ಮುಖಂಡರಾದ ಪೊಳಲಿ ಗಿರಿಪ್ರಕಾಶ್ ತಂತ್ರಿ, ಎಚ್.ಕೆ.ಪುರುಷೋತ್ತಮ್, ಮನೋಹರ್ ಸುವರ್ಣ, ಕೃಷ್ಣಮೂರ್ತಿ, ಗೋಪಾಲ ಕುತ್ತಾರು, ನಾರಾಯಣ ಕುಂಪಲ, ರವಿ ಅಸೈಗೋಳಿ, ಗುರುಪ್ರಸಾದ್ ಕಡಂಬಾರ್, ಶಿವಪ್ರಸಾದ್ ಕೊಣಾಜೆ, ಕಿಶನ್ ತಾರಿಪಡ್ಪು, ನಾಗೇಶ್ ಕುಂಪಲ, ಸತೀಶ್ ಕುಂಪಲ, ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಜಗದೀಶ ಆಳ್ವ ಕುವೆತ್ತಬೈಲು, ಮಾಧವಿ ಉಳ್ಳಾಲ್, ಮುರಳಿ ಕೊಣಾಜೆ, ಚಂದ್ರಶೇಖರ್ ಉಚ್ಚಿಲ್, ಲಲಿತಾ ಸುಂದರ್, ಜಗದೀಶ ಶೇಣವ ಭಾಗವಹಿಸಿದ್ದರು.

ಆಶಿಕ್ ಗೋಪಾಲಕೃಷ್ಣ ಸ್ವಾಗತಿಸಿ, ನಿರೂಪಿಸಿದರು. ಅರ್ಜುನ್ ಮಾಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಹರಿಪ್ರಸಾದ್ ಕೈರಂಗಳ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.