ಬಜಪೆ: ದಕ್ಷಿಣ ಕನ್ನಡ ಜಿಲ್ಲೆಯ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ (51) ಮೃತದೇಹ ಅವರು ವಾಸವಿದ್ದ ಧರ್ಮ ಚಾವಡಿಯ ಕಟ್ಟಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಈ ಸಾವಿನ ಕುರಿತು ಅನೇಕ ಸಂದೇಹಗಳು ವ್ಯಕ್ತವಾಗಿವೆ.

ಎಕ್ಕರೆಗಟ್ಟಲೆ ಪ್ರದೇಶದಲ್ಲಿ ಧರ್ಮ ಚಾವಡಿ ಸಂಸ್ಥೆಯನ್ನು ಕಟ್ಟಿದ್ದು ಇಲ್ಲಿಯೇ ಇವರು ವಾಸವಾಗಿದ್ದರು. ಸ್ವಾಮೀಜಿಯವರ ಪೂರ್ವಾಶ್ರಮದ ಪತ್ನಿ ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಪೂರ್ವಾಶ್ರಮದಲ್ಲಿ ದೇವಿಪ್ರಸಾದ್ ಶೆಟ್ಟಿ ಹೆಸರಿನಿಂದ ಗುರುತಿಸಲ್ಪಟ್ಟಿದ್ದು, ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಸಂಸಾರದಲ್ಲಿ ವಿರಸವಾಗಿ ಸನ್ಯಾಸ ಸ್ವೀಕರಿಸಿದ್ದರು.

ಪತ್ನಿ ಹಾಗೂ ಅವರ ತಾಯಿ ಧರ್ಮ ಚಾವಡಿ ಅಣತಿ ದೂರದಲ್ಲಿರುವ ಪೂರ್ವಾಶ್ರಮದ ಮನೆಯಲ್ಲಿ ವಾಸವಿದ್ದರು. ಮಗಳು ವಿದೇಶದಲ್ಲಿದ್ದಾರೆ. ಧರ್ಮ ಚಾವಡಿ ಪ್ರದೇಶದಲ್ಲಿ ಕೋಟಿಗಟ್ಟಲೆ ಬೆಲೆಯ ಸಂಪತ್ತೂ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.