ಮಂಗಳೂರು: 2022-23ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ವಿವಿಧ ತಾಲ್ಲೂಕುಗಳಲ್ಲಿ ಇದೇ 27ರಿಂದ ಆಯೋಜಿಸಲಾಗಿದೆ. ಬೆಳಿಗ್ಗೆ 9ರಿಂದ ಕ್ರೀಡಾಕೂಟಗಳು ನಡೆಯಲಿವೆ.

ಶನಿವಾರ ಮಂಗಳೂರು ತಾಲ್ಲೂಕಿನ ಮಂಗಳಾ ಕ್ರೀಡಾಂಗಣದಲ್ಲಿ, ಆ.28ರಂದು ಉಳ್ಳಾಲ ತಾಲ್ಲೂಕಿನ ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯ ಮೈದಾನದಲ್ಲಿ, ಸೆ.3ರಂದು ಮೂಡುಬಿದ್ರೆ ತಾಲ್ಲೂಕಿನ ಸ್ವರಾಜ್ ಮೈದಾನದಲ್ಲಿ, ಬೆಳ್ತಂಗಡಿ ತಾಲ್ಲೂಕಿನ ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಹಾಗೂ ಸುಳ್ಯ ತಾಲ್ಲೂಕಿನ ಪಂಜದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತ್ತು ಕಡಬ ತಾಲ್ಲೂಕಿನ ಸೆಂಟ್ ಮೇರೀಸ್ ಪ್ರೌಢಶಾಲೆಯಲ್ಲಿ, ಸೆ.4ರಂದು ಬಂಟ್ವಾಳ ತಾಲ್ಲೂಕಿನ ವಿಟ್ಲದ ಸರ್ಕಾರಿ ಪ್ರೌಢಶಾಲೆಯ ಮೈದಾನದಲ್ಲಿ ಹಾಗೂ ಪುತ್ತೂರು ತಾಲ್ಲೂಕಿನ ಕೊಂಬೆಟ್ಟು ತಾಲ್ಲೂಕು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ನಡೆಯಲಿದೆ ಎಂದು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.