ಬಂಟ್ವಾಳ: ಇಲ್ಲಿನ ಬಡಗಬೆಳ್ಳೂರು ಗ್ರಾಮದ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2004ರ ನ.7ರಂದು ನಡೆದ ಕಳವು ಪ್ರಕರಣದಲ್ಲಿ ಆರೋಪಿಯಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ರಾಜ್ಯ ಮತ್ತು ಕೇರಳದಲ್ಲಿ ವಿಳಾಸ ಬದಲಾವಣೆ ಮಾಡಿಕೊಂಡಿದ್ದ ಆರೋಪಿ, ಪುತ್ತೂರಿನ ಪಾಣಾಜೆ ನಿವಾಸಿ ಮೊಹಮ್ಮದ್ ಶರೀಫ್ (44) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಪೊಲೀಸರು ಬುಧವಾರ ವಶಕ್ಕೆ ಪಡೆದು ಗುರುವಾರ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೊಲೆ ಪ್ರಕರಣವೊಂದರಲ್ಲಿ ಕೇರಳದ ಮಂಜೇಶ್ವರ ಠಾಣಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಈಚೆಗಷ್ಟೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.

ಬಂಟ್ವಾಳ ಡಿವೈಎಸ್ಪಿ ವಿಜಯಪ್ರಸಾದ್ ಮಾರ್ಗದರ್ಶನದಂತೆ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಪಿಎಸ್ಐ ಹರೀಶ್ ಎಂ.ಆರ್., ಅಪರಾಧ ವಿಭಾಗದ ಪಿಎಸ್ಐ ಮೂರ್ತಿ, ಸಿಬ್ಬಂದಿ ಹರಿಶ್ಚಂದ್ರ, ಗಣೇಶ ಅವರ ತಂಡ ಕಾರ್ಯಾಚರಣೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.