ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಒಳಪಟ್ಟ, ಅಭಯ ಆಂಜನೇಯ ಗುಡಿ ದೇವಸ್ಥಾನದಿಂದ ಕಳವಾಗಿರುವ ಆಗಿರುವ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಭಯ ಆಂಜನೇಯ ಗುಡಿಯ ಅರ್ಚಕರು ನ.3ರಂದು ರಾತ್ರಿ ದೇವಸ್ಥಾನದ ಪೂಜಾಕಾರ್ಯ ಮುಗಿಸಿ ಬಾಗಿಲು ಹಾಕಿ ತೆರಳಿದ್ದು, ನ.4ರಂದು ಬೆಳಗ್ಗೆ ದೇವಸ್ಥಾನಕ್ಕೆ ಬಂದು ನೋಡಿದಾಗ ದೇವಸ್ಥಾನದ ಪೂಜಾ ಸಾಮಗ್ರಿಗಳು, ಸಿಸಿಟಿವಿ ಕ್ಯಾಮೆರಾದ ಸ್ವತ್ತುಗಳು ಕಳವಾಗಿರುವುದು ಗೊತ್ತಾಗಿದೆ. ಕಳವು ಆದ ಸ್ವತ್ತುಗಳ ಮೌಲ್ಯ ಸುಮಾರು ₹ 10 ಸಾವಿರ ಎಂದು ಅಂದಾಜಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಸುಬ್ರಹ್ಮಣ್ಯ ಠಾಣೆಗೆ ನೀಡಿದ ದೂರಿನಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.