ಸುಳ್ಯ (ದಕ್ಷಿಣ ಕನ್ನಡ): ಇಲ್ಲಿನ ಪಟ್ಟಣ ಪಂಚಾಯಿತಿ ಸಿಬ್ಬಂದಿ ಶಶಿಕಲಾ ಅವರಿಂದ ಅಧಿಕಾರಿಗಳು ಹುಲಿ ಉಗುರು ಹೋಲುವ ಪೆಂಡೆಂಟ್ ವಶಪಡಿಸಿಕೊಂಡಿದ್ದಾರೆ. ಸಿಬ್ಬಂದಿ ಹುಲಿ ಉಗುರು ಹೋಲುವ ಪೆಂಡೆಂಟ್ ಧರಿಸಿದ್ದ ಚಿತ್ರ ಜಾಲ ತಾಣಗಳಲ್ಲಿ ಹರಿದಾಡಿತ್ತು.

‘ಇದು ಅಸಲಿಯಲ್ಲ. ಯಾರೋ ಮಾರಾಟ ಮಾಡಲು ಬಂದವರಿಂದ ನನ್ನ ತಾಯಿ ಖರೀದಿಸಿ, ಧರಿಸುತ್ತಿದ್ದರು. ಅನೇಕ ವರ್ಷಗಳಿಂದ ನಾನು ಧರಿಸುತ್ತಿದ್ದೆ. ಫೋಟೊ ಜಾಲತಾಣಗಳಲ್ಲಿ ಹರಿದಾಡಿತ್ತು. ಅಧಿಕಾರಿಗಳ ಸೂಚನೆಯಂತೆ ವಲಯ ಅರಣ್ಯಾಧಿಕಾರಿ

ಕಚೇರಿಗೆ ತೆರಳಿ ಅದನ್ನು ಕೊಟ್ಟು ಬಂದಿದ್ದೇನೆ’ ಎಂದು ಶಶಿಕಲಾ ಪ್ರತಿಕ್ರಿಯಿಸಿದ್ದಾರೆ.

‘ಪೆಂಡೆಂಟ್‌ನ ಪರಿಶೀಲನೆಗೆ ಪ್ರಯೋಗಾಲಯದಲ್ಲಿ ಕಳುಹಿಸಿದೆ. ಅಸಲಿ ಹುಲಿ ಉಗುರಿನದ್ದಾಗಿದ್ದರೆ ಕ್ರಮ ಕೈಗೊಳ್ಳುತ್ತೇವೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.