ಉಳ್ಳಾಲ: ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ಜಿಲ್ಲಾ ಸಮಿತಿಯಿಂದ ದಾನಿಗಳ ಸಹಕಾರದಲ್ಲಿ ಮುನ್ನೂರು ಗ್ರಾಮದ ಸುಭಾಷ್ ನಗರದಲ್ಲಿ ನಿರ್ಮಿಸಲಾದ 'ಟಿಪ್ಪು ಹೌಸ್’ ಫಲಾನುಭವಿಗಳಿಗೆ ಶಾಸಕ ಯು.ಟಿ.ಖಾದರ್ ಹಸ್ತಾಂತರ ಮಾಡಿದರು.

‘ದೇಶದ ಇತಿಹಾಸ ಕಲಿತರೆ ಮಾತ್ರ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಇತಿಹಾಸ ತಿಳಿಸುವ ಕಾರ್ಯ ನಡೆಯಬೇಕು. ಇತಿಹಾಸ ತಿರುಚಿದ ಮಾತ್ರಕ್ಕೆ ಇತಿಹಾಸ ಪುರುಷರ ವ್ಯಕ್ತಿತ್ವಕ್ಕೆ ಧಕ್ಕೆ ಬರುವುದಿಲ್ಲ, ಅದು ಸಣ್ಣತನ ಆಗುತ್ತದೆ’ ಎಂದು ಖಾದರ್ ಹೇಳಿದರು.

ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು.

ಮಹಾವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿಪ್ಪು ಖಾಸಿಂ ಅಲಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮುನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಲ್ಫೇಡ್ ಡಿಸೋಜ, ನಿವೃತ್ತ ಪ್ರಾಧ್ಯಾಪಕ ಪಟ್ಟಾಭಿರಾಮ ಸೋಮಯಾಜಿ, ಕಾಂಗ್ರೆಸ್ ಮುಖಂಡರಾದ ಫಾರೂಕ್ ಉಳ್ಳಾಲ, ಇಕ್ಬಾಲ್ ಸಾಮಾನಿಗೆ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಕೆ. ಮಂಜನಾಡಿ, ಪತ್ರಕರ್ತ ಎ.ಕೆ.ಕುಕ್ಕಿಲ, ಉಳ್ಳಾಲ ನಗರಸಭೆಯ ಮಾಜಿ ಸದಸ್ಯ ಉಸ್ಮಾನ್ ಕಲ್ಲಾಪು, ವೇದಿಕೆಯ ಉಪಾಧ್ಯಕ್ಷ ವಿಷ್ಣುಮೂರ್ತಿ ಭಟ್, ಪ್ರಧಾನ ಕಾರ್ಯದರ್ಶಿ ನಝೀರ್ ಬಾರ್ಲಿ, ಹಿರಿಯ ಪತ್ರಕರ್ತ ವಿದ್ಯಾಧರ್ ಶೆಟ್ಟಿ ಇದ್ದರು. ಆರ್.ಕೆ.ಮದನಿ ಅಮ್ಮೆಂಬಳ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.