ಉಜಿರೆ (ದಕ್ಷಿಣ ಕನ್ನಡ): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಲಂಡನ್ನ ಎನ್ಕ್ಯೂಎ ಸಂಸ್ಥೆ ಐಎಸ್ಒ 27001 ಪ್ರಮಾಣ ಪತ್ರ ನೀಡಿದೆ.

ಶುಕ್ರವಾರ ಇಲ್ಲಿ ನಡೆದ ಸಮಾರಂಭದಲ್ಲಿ ಲಂಡನ್ನ ಎನ್ಕ್ಯೂಎ ಸಂಸ್ಥೆಯ ಮಹಾಪ್ರಬಂಧಕ ಅಮರ್ದೀಪ್ ಅವರು ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು.

2023ರಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನ ಬಳಕೆ, ಸುರಕ್ಷತೆ, ಬದ್ಧತೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ ಮೊದಲಾದ 114 ಅಂಶಗಳನ್ನು ಗಮನಿಸಿ ಈ ಪ್ರಮಾಣ ಪತ್ರ ನೀಡಲಾಗಿದೆ ಎಂದು ಅವರು ಹೇಳಿದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿ ದೇವಸ್ಥಾನ, ಕಚೇರಿ ಸೇರಿದಂತೆ ಎಲ್ಲ ಕಡೆಗಳಲ್ಲಿ ತಂತ್ರಜ್ಞಾನ ಬಳಕೆ ಇದೆ. ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಗ್ರಾಮೀಣ ಪ್ರದೇಶದ ಫಲಾನುಭವಿಗಳು ಕೂಡ ತಂತ್ರಜ್ಞಾನದ ಮೂಲಕವೇ ವ್ಯವಹಾರ ನಡೆಸುತ್ತಾರೆ ಎಂದರು.

ತಂತ್ರಜ್ಞಾನವು ಮನುಷ್ಯನ ಸೇವಕ ಆಗಬೇಕೇ ಹೊರತು ಮಾಲೀಕ ಆಗಬಾರದು. ತಂತ್ರಜ್ಞಾನದ ನೆಪದಲ್ಲಿ ಮಾನವೀಯ ಮೌಲ್ಯಗಳನ್ನು ಮರೆಯಬಾರದು ಎಂದು ಅವರು ಸಲಹೆ ನೀಡಿದರು.

ಹರೀಶ್ ಕೃಷ್ಣಸ್ವಾಮಿ, ಹೇಮಾವತಿ ವಿ.ಹೆಗ್ಗಡೆ, ಜಿ.ಎಸ್.ಭಾರ್ಗವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಮತ್ತು ಹಣಕಾಸು ಅಧಿಕಾರಿ ಶಾಂತಾರಾಮ ಪೈ ಇದ್ದರು. ಎಲ್.ಎಚ್. ಮಂಜುನಾಥ್ ಸ್ವಾಗತಿಸಿದರು. ಅನಿಲ್ಕುಮಾರ್ ಧನ್ಯವಾದ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.