ವಿಟ್ಲ: ವಿಠಲ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ. ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಆತಿಥೇಯರು ಚಾಂಪಿಯನ್ ಆಗಿದ್ದಾರೆ. ಬಾಲಕರ ವಿಭಾಗದಲ್ಲಿ ಬೆಳಗಾವಿ ಜಿಲ್ಲೆ ರನ್ನರ್ ಅಪ್ ಆಯಿತು. ಬಾಲಕಿಯರ ವಿಭಾಗದಲ್ಲೂ ಬೆಳಗಾವಿ ರನ್ನರ್ ಅಪ್ ಆಯಿತು.

ಸಮಾರೋಪ ಸಮಾರಂಭದಲ್ಲಿ ವಿಠಲ ಜೇಸಿಸ್ ಎಜುಕೇಷನ್ ಸೊಸೈಟಿ ಉಪಾಧ್ಯಕ್ಷ ರಾಧಾಕೃಷ್ಣ ಪೈ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರೇಮಾನಾಥ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಸೇಸಪ್ಪಗೌಡ ಹಾಗೂ ಕರ್ನಾಟಕ ರಾಜ್ಯ ವೇಟ್ಲಿಫ್ಟಿಂಗ್ ಸಂಸ್ಥೆಯ ಉಪಾಧ್ಯಕ್ಷ ಪುಷ್ಪರಾಜ್ ಹೆಗಡೆ ಅವರನ್ನು ಸನ್ಮಾನಿಸಲಾಯಿತು.

ಪ್ರಭಾಕರ ಶೆಟ್ಟಿ ದಂಬೆಕಾನ, ಮೋಹನ ಎ, ಶ್ರೀಪ್ರಕಾಶ್ ಕುಕ್ಕಿಲ, ಶ್ರೀಧರ ಶೆಟ್ಟಿ, ಹಸನ್ ವಿಟ್ಲ, ಯೋಗೀಶ್, ಪ್ರಮೋದ್ ಕುಮಾರ್ ಭುವನೇಶ್, ರಾಜೇಂದ್ರ ರೈ ಇದ್ದರು. ಜಯರಾಮ ರೈ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್ ಶೆಟ್ಟಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.