ಬೆಳ್ತಂಗಡಿ (ದಕ್ಷಿಣ ಕನ್ನಡ): ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.

ಪಡಂಗಡಿ ಪೊಯ್ಯೇಗುಡ್ಡೆಯ ಇವರಿಗೆ ವರ್ಷದ ಹಿಂದೆ ವಿವಾಹವಾಗಿತ್ತು. ಚಿಕ್ಕಮಗಳೂರಿನ ಪತಿಯ ಮನೆಯಲ್ಲಿ ನೆಲೆಸಿದ್ದರು. ಹೃದಯ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದರು.

ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿ ಪಡೆದಿದ್ದರು. ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ರಾಷ್ಟ್ರದ ವಾಲಿಬಾಲ್‌ನಲ್ಲಿ ಬೆಳ್ಳಿ ಪದಕ, ಸೀನಿಯರ್ ನ್ಯಾಷನಲ್ ದಕ್ಷಿಣ ವಲಯದಲ್ಲಿ ಚಿನ್ನದ ಪದಕ, ಜ್ಯೂನಿಯರ್ ನ್ಯಾಷನಲ್ ನಲ್ಲಿ ತೃತೀಯ ಸ್ಥಾನ ಗಳಿಸಿದ್ದರು.

ಅವರಿಗೆ ತಂದೆ, ತಾಯಿ, ಪತಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.