ಮಂಗಳೂರು: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ 27 ವರ್ಷದ ಯುವತಿ ಮೃತಪಟ್ಟಿರುವ ಘಟನೆಯು ಬಂಟ್ವಾಳ ನಗರ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ರೈಲಿನಲ್ಲೇ ಬಾಕಿಯಾಗಿದ್ದ ಯುವತಿಯ ಬ್ಯಾಗ್ನಲ್ಲಿದ್ದ ಆಧಾರ್ ಕಾರ್ಡ್ ಮೂಲಕ ಮೃತ ಯುವತಿಯನ್ನು ತುಮಕೂರು ಮೂಲದ ಎಂ.ಜಿ ನಯನ ಎಂದು ಗುರುತಿಸಲಾಗಿದೆ. ಕಣ್ಣೂರು– ಬೆಂಗಳೂರು– ಮಂಗಳೂರು ರೈಲಿನಲ್ಲಿ ಯುವತಿ ಪ್ರಯಾಣಿಸುತ್ತಿದ್ದರು.

ನದಿಯಲ್ಲಿ ತೇಲುತ್ತಿದ್ದ ಯುವತಿಯ ಮೃತದೇಹವನ್ನು ಸ್ಥಳೀಯರ ಸಹಾಯದಿಂದ ಹೊರತೆಗೆದು ಬಂಟ್ವಾಳ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಮೃತ ಯುವತಿಯ ಅಧಿಕೃತ ವಿಳಾಸ ಮತ್ತು ಆತ್ಮಹತ್ಯೆ ನಿರ್ಧಾರಕ್ಕೆ ಕಾರಣವೇನು ಎನ್ನುವುದು ತನಿಖೆಯ ಬಳಿಕ ತಿಳಿದು ಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್ಐ ದೇವಪ್ಪ ವಿಜಯಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.