ಮಂಗಳೂರು: ದಯಾನಂದ ಶೆಟ್ಟಿ ನಿರ್ಮಾಣದಲ್ಲಿ ಹಾಗೂ ಸಂತೋಷ್ ಶೆಟ್ಟಿ ನಿರ್ದೇಶನದಲ್ಲಿ ತಯಾರಾದ ‘ಯಾನ್ ಸೂಪರ್ ಸ್ಟಾರ್’ ತುಳು ಸಿನಿಮಾ ನಾಳೆ (ಸೆ 22ರಂದು) ಬಿಡುಗಡೆಯಾಗಲಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಿರ್ಮಾಪಕ ರಾಮ್ ಶೆಟ್ಟಿ, ‘ ಆನಂದ ಫಿಲಂಸ್ ಮತ್ತು ದ ಮಂಗಳೂರಿಯನ್ಸ್ ಲಾಂಛನದಲ್ಲಿ ಸಿನಿಮಾವನ್ನು ನಿರ್ಮಿಸಲಾಗಿದೆ’ ಎಂದರು.

ನಿರ್ಮಾಪಕ, ನಟ ದಯಾನಂದ ಶೆಟ್ಟಿ, ‘ಹಿಂದಿ ಸಿನಿಮಾ ಮತ್ತು ಧಾರವಾಹಿಗಳಲ್ಲಿ 25 ವರ್ಷಗಳಿಂದ ನಟಿಸಿದ್ದೇನೆ. ಯಾನ್ ಸೂಪರ್ ಸ್ಟಾರ್ ತುಳು ಸಿನಿಮಾದಲ್ಲಿ ನಟಿಸುವ ಮೂಲಕ ಬಹುದಿನಗಳ ಕನಸು ಈಡೇರಿದೆ. ಈ ಸಿನಿಮಾವನ್ನು ಖಂಡಿತಾ ತುಳುವರು ಇಷ್ಟಪಡುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಟ ಹರೀಶ್ ವಾಸು ಶೆಟ್ಟಿ, ‘ಈ ಸಿನಿಮಾ ನಗರದ ರೂಪವಾಣಿ, ಭಾರತ್ ಸಿನಿಮಾಸ್, ಪಿವಿಆರ್, ಸಿನಿಪೊಲಿಸ್, ಉಡುಪಿಯ ಕಲ್ಪನ, ಮಣಿಪಾಲದ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯ ಭಾರತ್ ಸಿನಿಮಾಸ್, ಕಾರ್ಕಳದ ರಾಧಿಕಾ, ಪ್ಲಾನೆಟ್, ಬೆಳ್ತಂಗಡಿಯ ಭಾರತ್, ಸುರತ್ಕಲ್ನ ನಟರಾಜ್, ಸಿನಿಗ್ಯಾಲಕ್ಸಿ, ಪುತ್ತೂರಿನ ಭಾರತ್ ಸಿನಿಮಾಸ್, ಸುಳ್ಯದ ಸಂತೋಷ್ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ’ ಎಂದರು.

ನಟ ನವೀನ್ ಡಿ. ಪಡೀಲ್, ‘ಮುಂಬೈ, ಪುಣೆಯಲ್ಲಿ ನಡೆದ ಪ್ರೀಮಿಯರ್ ಶೋಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೆಂಗಳೂರು ಮತ್ತು ಕೊಲ್ಲಿ ದೇಶಗಳಲ್ಲೂ ಸಿನಿಮಾ ಬಿಡುಗಡೆಗೆ ತಯಾರಿ ನಡೆದಿದೆ’ ಎಂದರು.
ಸಿಐಡಿ ಧಾರಾವಾಹಿಯ ನಟರಾದ ದಯಾನಂದ ಶೆಟ್ಟಿ, ಹರೀಶ್ ವಾಸು ಶೆಟ್ಟಿ, ಸಾಯಿ ಬಲ್ಲಾಲ್, ನವೀನ್ ಡಿ ಪಡೀಲ್, ಭೋಜರಾಜ ವಾಮಂಜೂರು, ಮಾನಸಿ ಸುಧೀರ್, ಅನ್ ಷಾ, ಅಶೋಕ್ ಪಕ್ಕಳ, ಬಾಲನಟರಾದ ಅತಿಶ್ ಶೆಟ್ಟಿ, ಅರುಷ್ ಯು ಪೂಜಾರಿ, ಶ್ರೀಯಾ ಹೆಗ್ಡೆ ತಾರಾಗಣದಲ್ಲಿದ್ದಾರೆ.

ಸಂತೋಷ್ ಶೆಟ್ಟಿ ಅವರ ಕತೆಗೆ ಸಚಿನ್ ಶೆಟ್ಟಿ ಕುಂಬಳೆ ಸಂಭಾಷಣೆ ಬರೆದಿದ್ದಾರೆ. ಸಂತೋಷ್ ಶೆಟ್ಟಿ, ಅಂಕಣ ಜೋಷಿ ಅವರ ಚಿತ್ರಕತೆ, ವಿ ಮನೋಹರ್ ಸಾಹಿತ್ಯ ಮತ್ತು ಸಂಗೀತವಿದೆ. ಗುರುಕಿರಣ್ ಹಾಡು ಹಾಡಿದ್ದಾರೆ. : ಸಂಜಯ್ ವಾಂದ್ರೇಕರ್ ಅವರ ಹಿನ್ನಲೆ ಸಂಗೀತ, ಕೃಷ್ಣರಾಜ್ ಕೋಟ್ಯಾನ್ ಅವರ ಛಾಯಾಗ್ರಹಣ, ಆನಂದ ಶೆಟ್ಟಿ ಅವರ ಸಾಹಸವಿದೆ.

ಸುದ್ದಿಗೋಷ್ಠಿಯಲ್ಲಿ ಹರೀಶ್ ವಾಸು ಶೆಟ್ಟಿ, ನಿರ್ದೇಶಕ ಸಂತೋಷ್ ಶೆಟ್ಟಿ, ರಾಮ್ ಶೆಟ್ಟಿ, ಕಲಾ ನಿರ್ದೇಶಕ ತಮ್ಮ ಲಕ್ಷ್ಮಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.