ಬಂಟ್ವಾಳ:ತಾಲ್ಲೂಕಿನ ಸಜೀಪ ಪಡು ಗ್ರಾಮದ ತಲೆಮೊಗರು ಎಂಬಲ್ಲಿ ನೇತ್ರಾವತಿ ನದಿಗೆ ಈಜಲು ಹೋದ ಐವರು ಯುವಕರಲ್ಲಿ ಒಬ್ಬ ನೀರು ಪಾಲಾಗಿದ್ದಾನೆ. ನಾಲ್ವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ತಲೆಮೊಗರು ನಿವಾಸಿ ರುಕ್ಮಯ ಅವರ ಪುತ್ರ ಅಶ್ವಿತ್ (19) ನೀರುಪಾಲಾದ ಯುವಕ.

ಹರ್ಷ, ಲಿಖಿತ್, ವಿಕೇಶ್ ಮತ್ತು ವಿಶಾಲ್ ಅವರನ್ನು ರಕ್ಷಣೆ ಮಾಡಲಾಗಿದೆ. ಈ ಪೈಕಿಹರ್ಷನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಂಬಂಧಿಕರ ಮನೆಗೆ ತೊಟ್ಟಿಲು ತೂಗುವ ಸಂಭ್ರಮಕ್ಕೆ ಬಂದಿದ್ದಸ್ನೇಹಿತರಾದ ಐವರು ಭಾನುವಾರ ಸಂಜೆ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದು, ಈ ವೇಳೆ ಅವಘಡ ಸಂಭವಿಸಿದೆ.ನೀರುಪಾಲಾದ ಅಶ್ವಿತ್‌ನ ಪತ್ತೆಗಾಗಿ ಸ್ಥಳೀಯ ಮುಳುಗು ತಜ್ಞರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯ ಮೂಲಕ ಹುಡುಕಾಟ ಮುಂದುವರಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.