ಪುತ್ತೂರು: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘದ (ಎಸ್‌ವೈಎಸ್) 30ನೇ ವರ್ಷಾಚರಣೆಯ ಪ್ರಚಾರಾರ್ಥವಾಗಿ ಉಪ್ಪಿನಂಗಡಿಯ ಎಚ್.ಎಂ ಅಡಿಟೋರಿಯಂ ಮುಂಭಾಗದಲ್ಲಿ ಗುರುವಾರ ಸಂಜೆ 4 ಗಂಟೆಗೆ ಬೃಹತ್ ಸುನ್ನಿ ಸಮಾವೇಶ `ಯುವಜನೋತ್ಸವ' ನಡೆಯಲಿದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಬ್ದುಲ್ ಅಝೀಝ್ ಮಿಸ್ಬಾಹಿ ಈಶ್ವರಮಂಗಲ ಹೇಳಿದರು.

ಪುತ್ತೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಾಮಾಜಿಕ ಬದುಕಿನಲ್ಲಿ ಸೌಹಾರ್ದತೆಯನ್ನು ಬಿಂಬಿಸುವುದು ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ’ ಎಂದರು.

ಅಬ್ದುಲ್ ವಹ್ವಾಬ್ ಸಖಾಫಿ ಮಂಬಾಡ್ ಮುಖ್ಯ ಭಾಷಣ ಮಾಡುವರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸುವರು. ಎಚ್.ಎಂ ಅಡಿಟೋರಿಯಂ ಮುಂಭಾಗದಿಂದ ಸಂದೇಶ ರ್‍ಯಾಲಿ ಆರಂಭಗೊಂಡು ಉಪ್ಪಿನಂಗಡಿಯ ಮುಖ್ಯ ಬೀದಿಯಲ್ಲಿ ಸಾಗಲಿದೆ. ಬೆಳ್ತಂಗಡಿ, ಕಡಬ, ಸುಳ್ಯ, ಉಪ್ಪಿನಂಗಡಿ, ಪುತ್ತೂರು, ವಿಟ್ಲ ವ್ಯಾಪ್ತಿಯನ್ನೊಳಗೊಂಡ ಈಸ್ಟ್ ಎಸ್‌ವೈಎಸ್ ಸಂಘಟನೆಯಲ್ಲಿ ಸದ್ಯ 12 ಸಾವಿರಕ್ಕೂ ಹೆಚ್ಚು ಸದಸ್ಯರಿದ್ದಾರೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಮುರ, ಯುವಜನೋತ್ಸವ ನಿರ್ವಹಣಾ ಸಮಿತಿಯ ಕಾರ್ಯಾಧ್ಯಕ್ಷ ಅಬ್ದುಲ್ ಕರೀಂ ಹಾಜಿ ಚೆನ್ನಾರ್, ನಿರ್ವಹಣಾ ಸಮಿತಿ ಕೋಶಾಧಿಕಾರಿ ಮುಸ್ತಾಫಾ ಕೋಡಪದವು, ಸಮಿತಿ ಸಂಯೋಜಕ ಸಲೀಂ ಕನ್ಯಾಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.