ಮಂಗಳೂರು: ಯುವವಾಹಿನಿ ಸದಸ್ಯರು ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು ಸಂಸ್ಥೆಯ ಕೇಂದ್ರ ಸಮಿತಿಯ ಉಪಾಧ್ಯಕ್ಷ ಹರೀಶ್ ಕೆ.ಪೂಜಾರಿ ಸಲಹೆ ನೀಡಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಮಂಗಳೂರು ಘಟಕವು ಸದಸ್ಯರು, ಅವರ ಮಕ್ಕಳು ಮತ್ತು ಮಹಿಳೆಯರಿಗಾಗಿ ಆಯೋಜಿಸಿದ್ದ ಸಂಗೀತ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು. ಸದಸ್ಯರಲ್ಲಿ ಸುಪ್ತವಾಗಿರುವ ಪ್ರತಿಭೆಯ ಅನಾವರಣಕ್ಕೆ ಸ್ಪರ್ಧೆಗಳು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

ಸಂಗೀತ ಸ್ಪರ್ಧೆಯಲ್ಲಿ 9 ಮಕ್ಕಳು, 8 ಮಂದಿ ಮಹಿಳೆಯರು ಮತ್ತು 19 ಸದಸ್ಯರು ಭಾಗವಹಿಸಿದ್ದರು. ತೀರ್ಪುಗಾರರಾಗಿದ್ದ ಚಂದ್ರಶೇಖರ್ ಮತ್ತು ವಿದ್ಯಾಶ್ರೀ, ಸ್ಪರ್ಧಿಗಳಲ್ಲಿ ಉತ್ತಮ ಪ್ರತಿಭೆ ಇದ್ದು ಸೂಕ್ತ ತರಬೇತಿ ಪಡೆದರೆ ಗಾಯಕರಾಗಿ ಮೂಡಿ ಬರಲಿದ್ದಾರೆ ಎಂದರು.

ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕ ಜಗದೀಶ್ ಕುಮಾರ್ ಮುಖ್ಯ ಅತಿಥಿಯಾಗಿದ್ದರು. ವಿಜೇತರಾದವರಿಗೆ ಅವರು ಬಹುಮಾನ ವಿತರಿಸಿದರು. ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಯೋಗೀಶ್ ಕುಮಾರ್,ಘಟಕದ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನೀರ್ದೇಶಕ ಸತೀಶ್ ಕೆ ಇದ್ದರು.

ಮಂಗಳೂರು ಘಟಕದ ಅಧ್ಯಕ್ಷ ಗಣೇಶ್ ವಿ.ಕೋಡಿಕಲ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈವಾಹಿಕ ಜೀವನದ ರಜತ ಮಹೋತ್ಸವ ಆಚರಿಸುತ್ತಿರುವ ಯೋಗೀಶ್ ಕುಮಾರ್ ದಂಪತಿಯನ್ನು ಸನ್ಮಾನಿಸಲಾಯಿತು. ನಾಗೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅಶೋಕ್ ಅಂಜನ್ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.