ಮಂಗಳೂರು: ಇಲ್ಲಿನ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಆಶ್ರಯ ಕಾಲೋನಿಯ ಮನೆಯೊಂದರಲ್ಲಿ ಮಹಾತ್ಮ ಗಾಂಧೀಜಿಯ ಹಂತಕ ನಾಥೂರಾಮ್ ಗೋಡ್ಸೆ ಜನ್ಮದಿನ ಆಚರಣೆ ಮಾಡಿದ್ದ ಪ್ರಕರಣದಲ್ಲಿ ಹಿಂದೂ ಮಹಾಸಭಾ ಮುಖಂಡ ರಾಜೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕುಂಪಲ ಆಶ್ರಯ ಕಾಲೋನಿಯ ವಿಶ್ವನಾಥ ಪೂಜಾರಿ ಎಂಬಾತನ ಮನೆಯಲ್ಲಿ ಭಾನುವಾರ ನಾಥೂರಾಮ್ ಗೋಡ್ಸೆ ಜಯಂತಿ ಆಚರಿಸಲಾಗಿತ್ತು. ಈ ಸಂಬಂಧ ಹಿಂದೂ ಮಹಾಸಭಾ ಮುಖಂಡರಾದ ರಾಜೇಶ್, ಲೋಹಿತ್, ವಿಶ್ವನಾಥ ಪೂಜಾರಿ ಸೇರಿದಂತೆ ಐವರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಖಚಿತ ಮಾಹಿತಿ ಆಧರಿಸಿ ರಾಜೇಶ್ ಎಂಬ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.