ದಾವಣಗೆರೆ: ‘ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ವಿನಯ್ ಕುಲಕರ್ಣಿ ರಾಷ್ಟ್ರದ್ರೋಹಿಗಳು. ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.

ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಗುರುವಾರ ಮಾತನಾಡಿದರು.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಖಂಡ ಭಾರತದ ಕುರಿತು ಮಾತನಾಡಿದರೆ ಸಾಲದು. ತಾಕತ್ತಿದ್ದರೆ ಡಿ.ಕೆ.ಸುರೇಶ್ ಹಾಗೂ ವಿನಯ್ ಕುಲಕರ್ಣಿ ಅವರನ್ನು ಪಕ್ಷದಿಂದ ವಜಾಗೊಳಿಸಬೇಕು’ ಎಂದು ಸವಾಲು ಹಾಕಿದರು.

‘ಸುರೇಶ್ ಹಾಗೂ ವಿನಯ್ ಅವರ ಮಾತಿನಲ್ಲಿ ಜಿನ್ನಾ ಸಂಸ್ಕೃತಿ ಎದ್ದು ಕಾಣುತ್ತಿದೆ. ದೇಶ ವಿಭಜಿಸಲು ಯಾರಿಂದಲೂ ಸಾಧ್ಯವಿಲ್ಲ. ಅದಕ್ಕೆ ಬಿಜೆಪಿ ಅವಕಾಶವನ್ನೂ ನೀಡುವುದಿಲ್ಲ. ಬೇಕಿದ್ದರೆ ಪಾಕಿಸ್ತಾನವನ್ನೇ ಭಾರತಕ್ಕೆ ಸೇರ್ಪಡೆ ಮಾಡುತ್ತೇವೆ’ ಎಂದು ಹೇಳಿದರು.

‘ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಬಿಜೆಪಿ ಸಂಸದರು ಗಂಡಸರಲ್ಲ ಎಂದಿದ್ದಾರೆ. ನಮ್ಮ ಪಕ್ಷದಲ್ಲಿ ಗಂಡಸರು ಇದ್ದಾರೋ ಇಲ್ಲವೋ ಎಂಬುದನ್ನು ಎಲ್ಲಿ ತೋರಿಸಬೇಕು. ಅವರು ಆ ರೀತಿ ಮಾತನಾಡಬಾರದಿತ್ತು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.