ಹರಿಹರ (ದಾವಣಗೆರೆ ಜಿಲ್ಲೆ): ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪಂಚಮಸಾಲಿ ಎಂಬ ಕಾರಣದಿಂದ ಅವರನ್ನು ಬಿಜೆಪಿಯಲ್ಲಿ ಮೂಲೆಗುಂಪು ಮಾಡಲಾಗಿದೆ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಆರೋಪಿಸಿದ್ದಾರೆ.

ಪಂಚಮಸಾಲಿ ಸಮುದಾಯದವರಿಗೆ ರಾಜಕೀಯವಾಗಿ ಅನ್ಯಾಯವಾಗಿದೆ. ಯತ್ನಾಳ ಅವರು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ದಿವಂಗತ ಅನಂತಕುಮಾರ್ ಅವರಂತೆಯೇ ಸೈಕಲ್ ತುಳಿದು ಪಕ್ಷ ಕಟ್ಟಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಈಗಲೂ ಕೇಂದ್ರದಲ್ಲಿ ಪ್ರಭಾವಿ ನಾಯಕರಾಗಿರಬೇಕಿತ್ತು. ಆದರೆ, ಅವರನ್ನು ತಾಲ್ಲೂಕು ಮಟ್ಟದ ನಾಯಕರನ್ನಾಗಿಸಿರುವುದು ಅತ್ಯಂತ ನೋವಿನ ಸಂಗತಿ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಅರ್ಹತೆ ಇದ್ದರೂ ಯಡಿಯೂರಪ್ಪ ಅವರ ನಂತರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಲು ಬಿಡಲಿಲ್ಲ. ಇತ್ತೀಚೆಗೆ ವಿರೋಧ ಪಕ್ಷದ ನಾಯಕರಾಗುವ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗುವ ಅವಕಾಶವನ್ನೂ ತಪ್ಪಿಸಲಾಯಿತು. ಅವರು ಪಂಚಮಸಾಲಿ ಸಮುದಾಯದವರು ಎಂಬ ಕಾರಣಕ್ಕೆ ತಾರತಮ್ಯ ಎಸಗಲಾಗುತ್ತಿದೆ ಎಂದು ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.