ದಾವಣಗೆರೆ: ‘ಅಂಬೇಡ್ಕರ್ ಭವನಗಳ ಹಾಗೆ ಎಲ್ಲಾ ಜಿಲ್ಲೆಗಳಲ್ಲೂ ಬಸವ ಭವನಗಳನ್ನು ನಿರ್ಮಿಸಬೇಕು’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಆಗ್ರಹಿಸಿದರು.

ನಗರದಲ್ಲಿ ಶನಿವಾರ ನಡೆದ ‘ಕರ್ನಾಟಕದ ಸಾಂಸ್ಕೃತಿಕ ನಾಯಕ’ ಬಸವಣ್ಣನವರ ಭಾವಚಿತ್ರ ಅನಾವರಣ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಪ್ರತಿ ಜಿಲ್ಲೆಯಲ್ಲೂ ಬಸವ ಭವನ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದೇವೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ಬೇಡಿಕೆ ಈಡೇರುವ ವಿಶ್ವಾಸವಿದೆ’ ಎಂದರು.

‘ಬಸವಣ್ಣ ಅವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ಘೋಷಿಸುವಂತೆ ದಾವಣಗೆರೆಯಲ್ಲಿ ನಡೆದ ಮಹಾಸಭಾದ ರಾಷ್ಟ್ರೀಯ ಅಧಿವೇಶನದಲ್ಲಿ ಒತ್ತಾಯಿಸಲಾಗಿತ್ತು. ಸರ್ಕಾರ ನಮ್ಮ ಬೇಡಿಕೆ ಈಡೇರಿಸಿದೆ. ಇದಕ್ಕಾಗಿ ಶೀಘ್ರವೇ ಬಸವಕಲ್ಯಾಣದಲ್ಲಿ ಕಾರ್ಯಕ್ರಮ ನಡೆಸಿ ಮುಖ್ಯಮಂತ್ರಿಯವರನ್ನು ಗೌರವಿಸಲಾಗುವುದು’ ಎಂದು ಹೇಳಿದರು.

‘ಶಾಲೆಗಳಲ್ಲಿ ಬಸವಣ್ಣನ ವಚನಗಳ ಬೋಧನೆಗೆಂದೇ ಒಂದು ಅವಧಿ ಮೀಸಲಿಡುವಂತೆ ಸರ್ಕಾರವನ್ನು ಒತ್ತಾಯಿಸಿ’ ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರು ಶಾಮನೂರು ಶಿವಶಂಕರಪ್ಪಗೆ ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.