ಜಗಳೂರು: ‘ಜನವಿರೋಧಿಯಾಗಿದ್ದ ರಾಜ್ಯದ ಬಿಜೆಪಿ ಸರ್ಕಾರವನ್ನು ಜನರು ಕಿತ್ತೆಸೆದಿದ್ದಾರೆ. ಬಿಜೆಪಿ ಪಕ್ಷದ ಡಬಲ್ ಎಂಜಿನ್ ಸರ್ಕಾರದ ಆಡಳಿತದಲ್ಲಿ ಒಂದು ಎಂಜಿನ್ ಕಳಚಿಬಿದ್ದಿದೆ. ಮುಂದಿನ ದಿನಗಳಲ್ಲಿ ಇನ್ನೊಂದು ಎಂಜಿನ್ ಕಿತ್ತೆಸೆಯಲು ಮತದಾರರು ನಿರ್ಧರಿಸಿದ್ದಾರೆ’ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.

ತಾಲ್ಲೂಕಿನ ಕೆಳಗೋಟೆ ಗ್ರಾಮದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

‘ಕೆಲವರು ನನ್ನ ಬಗ್ಗೆ ಅಪಪ್ರಚಾರ ನಡೆಸಿದ್ದಾರೆ. ಆದರೆ ನಾನೊಬ್ಬ ಶಾಂತಿಪ್ರಿಯ. ಎಲ್ಲರನ್ನೂ ಪ್ರೀತಿಸುತ್ತೇನೆ. ಕ್ಷೇತ್ರದಲ್ಲಿ ಮತಹಾಕಿದವರಿಗೆ ಮಾತ್ರವಲ್ಲ, ಜಗಳೂರು ಕ್ಷೇತ್ರದ ಸಮಸ್ತ ಮತದಾರರಿಗೆ ನಾನು ಶಾಸಕ. ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಶ್ರಮಿಸುತ್ತೇನೆ. ಶಿಕ್ಷಣ ಸಂಸ್ಥೆಯಲ್ಲಿ ಜವಾನ ವೃತ್ತಿಯನ್ನು 33 ವರ್ಷಗಳ ಕಾಲ ಸೇವೆಗೈದು ಕುಟುಂಬ ನಿರ್ವಹಣೆಯ ಜೊತೆಗೆ ಬದುಕು ಕಟ್ಟಿಕೊಂಡಿದ್ದೇನೆ. ಮೂಲ ವೃತ್ತಿ ಗೌರವಕ್ಕಾಗಿ ಜೂನ್ 1ರಂದು ನಾನು ಕೆಲಸ ಮಾಡಿದ ಸಂಸ್ಥೆಯಲ್ಲಿ ಕಸಗುಡಿಸಿ, ಗಂಟೆ ಬಾರಿಸಿ ಕ್ಷೇತ್ರದ ಅಭಿವೃದ್ಧಿ ಚಟುವಟಿಕೆಗೆ ಚಾಲನೆ ನೀಡುತ್ತೇನೆ’ ಎಂದು ಹೇಳಿದರು.

‘ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಅಧಿಕಾರ ಅನುಭವಿಸಿ ನಂತರ ಶೇ 90ರಷ್ಟು ಕಾರ್ಯಕರ್ತರು ಬೀದಿಯಲ್ಲಿ ಬಿಟ್ಟು ಹೋಗುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಕ್ಷೇತ್ರದ ಜನತೆಯ ಬೆಂಬಲದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಸಾರ್ವಜನಿಕರ ಅಹವಾಲು ಸ್ವೀಕರಿಸಲು ಪಟ್ಟಣದ ಹಳೆಯ ಪಟ್ಟಣ ಪಂಚಾಯಿತಿ ಕಚೇರಿಯನ್ನು ಜನಸಂಪರ್ಕ ಕೇಂದ್ರವನ್ನಾಗಿಸಲಾಗುವುದು’ ಎಂದರು.

ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ತಾಲ್ಲೂಕು ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮ್ಮದ್, ಪಲ್ಲಾಗಟ್ಟೆ ಶೇಖರಪ್ಪ, ಸಿ.ತಿಪ್ಪೇಸ್ವಾಮಿ, ಗುರುಸ್ವಾಮಿ, ರವಿಕುಮಾರ್, ಶಕೀಲ್ ಅಹಮ್ಮದ್, ಮಹಮ್ಮದ್ ಗೌಸ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.