‘ಗುತ್ತಿಗೆ ನೌಕರರಿಗೆ ನೇರ ಪಾವತಿ’
ಆರೋಗ್ಯ ಇಲಾಖೆಯ ‘ಡಿ’ ಗ್ರೂಪ್ ನೌಕರರಿಗೆ ನೇಮಕಾತಿ ವ್ಯವಸ್ಥೆಯಲ್ಲಿ ಬದಲಾವಣೆ ತರಲಾಗುತ್ತಿದೆ. ಹೊರಗುತ್ತಿಗೆ ಬದಲು ನೇರ ವೇತನ ಪಾವತಿ ವ್ಯವಸ್ಥೆ ಅಳವಡಿಸಿಕೊಳ್ಳುವ ಬಗ್ಗೆ ಕಾನೂನು ಇಲಾಖೆಯ ಸಲಹೆ ಕೇಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ‘ಹೊರಗುತ್ತಿಗೆ ವ್ಯವಸ್ಥೆಯನ್ನು ಕೈಬಿಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಪ್ರಯತ್ನಿಸುತ್ತಿದೆ. ಗುತ್ತಿಗೆ ನೌಕರರಿಗೆ ನೇರ ಪಾವತಿ ವ್ಯವಸ್ಥೆ ಜಾರಿಗೊಳಿಸಿದರೆ ಅನುಕೂಲವಾಗಲಿದೆ. ಕಾನೂನು ಇಲಾಖೆ ಒಪ್ಪಿಗೆ ನೀಡಿದರೆ ಇಡೀ ರಾಜ್ಯದಲ್ಲಿ ಶೀಘ್ರ ಅನುಷ್ಠಾನಕ್ಕೆ ಬರಲಿದೆ’ ಎಂದು ಮಾಹಿತಿ ನೀಡಿದರು.