ಹೊನ್ನಾಳಿ: ದಲಿತರ, ಶೋಷಿತರ, ಮಹಿಳೆಯರ, ರೈತರ, ಕಾರ್ಮಿಕರ, ವಿಮೋಚನೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಸ್ವಾಭಿಮಾನದ ಮೂಲಕ ಸಮಸಮಾಜ ನಿರ್ಮಾಣಕ್ಕೆ ಭದ್ರವಾದ ಬುನಾದಿ ಹಾಕಿದರು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಧನಂಜಯ ಅಭಿಪ್ರಾಯಪಟ್ಟರು.

ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ, ರೆಡ್ ಕ್ರಾಸ್ ಯುವ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಸಾಂಸ್ಕೃತಿಕ ವಿಭಾಗದ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

ಬಾಬಾ ಸಾಹೇಬರು ಇಪ್ಪತ್ತನೇ ಶತಮಾನದ ದಲಿತ ಮತ್ತು ಹಿಂದುಳಿದ ವರ್ಗಗಳ ಚಳವಳಿಗಳಿಗೆ ತಾತ್ವಿಕ ನೆಲೆಗಟ್ಟು ನೀಡಿದರು. ದಬ್ಬಾಳಿಕ ಮತ್ತು ತುಳಿತಕ್ಕೆ ಒಳಗಾಗಿದ್ದ ದಲಿತರಲ್ಲಿ ಜಾಗೃತಿ ಮೂಡಿಸಿದರು. ಸೃಜನಶೀಲ ನಾಯಕರಾಗಿ ಭಾರತದ ಶ್ರೇಷ್ಠತೆಯನ್ನು ಎತ್ತಿ ಹಿಡಿದವರು. ಹಣ ಮಾಡದೆ ಜನರನ್ನು ವಿದ್ಯಾವಂತರನ್ನಾಗಿ ಮಾಡಿದರು. ವಿಶ್ವದಲ್ಲೇ ಸರ್ವಶ್ರೇಷ್ಠ ಸಂವಿಧಾನವನ್ನು ರಚಿಸಿ ಸಾಮಾಜಿಕ ರಾಜಕೀಯ ಪರಿವರ್ತನೆಗೆ ನಾಂದಿ ಹಾಡಿದರು. ದೇಶದಲ್ಲಿ ಪ್ರಥಮ ಬಾರಿಗೆ ಅನ್ನದಾತರನ್ನು, ಕಾರ್ಮಿಕರನ್ನು, ಆದಿವಾಸಿಗಳನ್ನು, ಮಹಿಳೆಯರನ್ನು, ಪರಿಶಿಷ್ಟ ಜಾತಿ ಮತ್ತು ವರ್ಗ, ಹಿಂದುಳಿದ ಮತ್ತು ಅಲ್ಪಸಂಖ್ಯಾತರನ್ನು ಸಂಘಟಿಸಿದ ಕೀರ್ತಿ ಬಾಬಾ ಸಾಹೇಬರಿಗೆ ಸಲ್ಲುಸತ್ತದೆ. ಅವರ ತತ್ವ ಮತ್ತು ಚಿಂತನೆಯನ್ನು ಗೌರವಿಸಿ ಪಾಲಿಸುವುದು ಭಾರತೀಯರ ಆದ್ಯ ಕರ್ತವ್ಯ ಎಂದು ಹೇಳಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೂತನ ಭಾವಚಿತ್ರವನ್ನು ಅನಾವರಣ ಮಾಡಲಾಯಿತು. ಪ್ರೊ.ದೇವರಾಜ ಸಿ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಂಥಪಾಲಕರಾದ ಪ್ರೊ.ನಾಗರಾಜನಾಯ್ಕ ಪ್ರೊ.ಬೆಳ್ಳುಳ್ಳಿ ಕೊಟ್ರೇಶ, ಹರೀಶ ಪಿ.ಎಸ್., ಪ್ರೊ.ಗೀತಾ ಎಚ್.ವಿ., ಪ್ರೊ.ಹರಾಳು ಮಹಾಬಲೇಶ್ವರ, ಮಂಜುನಾಥಗುರು ವಿ.ಜಿ., ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.