ದಾವಣಗೆರೆ: ಚನ್ನಗಿರಿಯಲ್ಲಿ ನಡೆದ ಘಟನೆ ಸಂಬಂಧ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆಯಬೇಕು ಹಾಗೂ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ)ಗೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್–ಬಜರಂಗ ದಳ ಜಿಲ್ಲಾ ಘಟಕ ಒತ್ತಾಯಿಸಿತು.

ಸಾವಿರಾರು ಜನರು ಠಾಣೆಗೆ ನುಗ್ಗಿ ಹಲ್ಲೆ ಪೊಲೀಸರ ಮೇಲೆ ಹಲ್ಲೆ ಮಾಡಿದ್ದು, ಘಟನೆಯಲ್ಲಿ 11ರಿಂದ 15 ಪೊಲೀಸರಿಗೆ ಗಾಯಗಳಾಗಿವೆ. ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಈ ಘಟನೆ ನಡೆದಿದ್ದು, ಕೂಲಂಕಷವಾಗಿ ತನಿಖೆ ನಡೆಯಬೇಕಾದರೆ ಎನ್‌ಐಎಗೆ ವಹಿಸಬೇಕು’ ಎಂದು ಬಜರಂಗ ದಳದ ಜಿಲ್ಲಾ ಕಾರ್ಯದರ್ಶಿ ಎನ್.ಎಸ್.ರಾಜು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

‘ಇಂತಹ ಕೃತ್ಯ ನಡೆದಿದ್ದರೂ ಇದೊಂದು ಆಕಸ್ಮಿಕ ಘಟನೆ ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಹೇಳುತ್ತಿದ್ದಾರೆ. ಈ ಘಟನೆ ಪೊಲೀಸ್ ಇಲಾಖೆಗೆ ಭಯ ಹುಟ್ಟಿಸಿದ್ದು, ಕಾಂಗ್ರೆಸ್ ಮುಸಲ್ಮಾನರನ್ನು ಓಲೈಸಿದ್ದರಿಂದಲೇ ರಾಜ್ಯದಲ್ಲಿ ಲವ್ ಜಿಹಾದ್, ಗೋಹತ್ಯೆಯಂತಹ ಪ್ರಕರಣಗಳು ನಡೆಯುತ್ತಿವೆ. ಈ ಸರ್ಕಾರ ಸಂವಿಧಾನವನ್ನು ಹೇಗೆ ರಕ್ಷಿಸುತ್ತದೆ’ ಎಂದು ಪ್ರಶ್ನಿಸಿದರು.

‘ಸರ್ಕಾರ ಮುಸ್ಲಿಮರನ್ನು ತುಷ್ಟೀಕರಣ ಮಾಡುತ್ತಿರುವುದರಿಂದ ಭಯೋತ್ಪಾದನೆ ಕೃತ್ಯಗಳಿಗೆ ಪ್ರಚೋದನೆ ನೀಡಿದಂತೆ ಆಗಿದ್ದು, ಈ ರೀತಿಯ ಓಲೈಕೆ ರಾಜಕಾರಣಕ್ಕೆ ಜನರು ಮುಂದಿನ ದಿನಗಳಲ್ಲಿ ಉತ್ತರ ಕೊಡುತ್ತಾರೆ’ ಎಂದು ಎಚ್ಚರಿಸಿದರು.

‘ಚನ್ನಗಿರಿಯ ಘಟನೆಯನ್ನು ನೋಡಿದರೆ ಇದೊಂದು ಪೂರ್ವ ನಿಯೋಜಿತ ಕೃತ್ಯದಂತೆ ಗೋಚರಿಸುತ್ತಿದೆ’ ಎಂದು ಮುಖಂಡ ಮಂಜುನಾಥ್ ಕೆ.ಎಂ. ಹೇಳಿದರು.

ಕಲ್ಯಾಣಮ್ಮ, ಬಸವರಾಜ್, ಹರೀಶ್ ಪವಾರ್, ಸುರೇಶ್ ಇತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.