ದಾವಣಗೆರೆ: ನಗರದ ಎ.ವಿ.ಕೆ. ಕಾಲೇಜು ರಸ್ತೆಯಲ್ಲಿ ಮಾರ್ಚ್ 3ರಂದು ದಾವಣಗೆರೆ ಚಿತ್ರಕಲಾ ಪರಿಷತ್ನಿಂದ ಮೂರನೇ ವರ್ಷದ ‘ದಾವಣಗೆರೆ ಚಿತ್ರಸಂತೆ’ ಆಯೋಜಿಸಲಾಗಿದೆ ಎಂದು ದಾವಣಗೆರೆ ಚಿತ್ರಕಲಾ ಪರಿಷತ್ನ ಕಾರ್ಯದರ್ಶಿ ಡಿ. ಶೇಷಾಚಲ ಹೇಳಿದರು.

ಚಿತ್ರಸಂತೆಗೆ ಹಿಂದಿನ ವರ್ಷಗಳು ಉತ್ತಮ ಸ್ಪಂದನೆ ವ್ಯಕ್ತವಾಗಿತ್ತು. ಈ ಬಾರಿಯೂ ವಿವಿಧ ಜಿಲ್ಲೆ ಹಾಗೂ ಮಹಾರಾಷ್ಟ್ರ, ತಮಿಳುನಾಡು, ಒಡಿಶಾ, ರಾಜಸ್ಥಾನ, ಆಂಧ್ರಪ್ರದೇಶ ಸೇರಿದಂತೆ ವಿವಿಧೆಡೆಯ ಕಲಾವಿದರು ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ಅಂದು ಬೆಳಿಗ್ಗೆ 8ರಿಂದ ರಾತ್ರಿ 7ರವರೆಗೆ ಕಲಾವಿದರ ಚಿತ್ರಕಲೆಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ಶಾಮನೂರು ಶಿವಶಂಕರಪ್ಪ, ಡಿ.ಜಿ. ಶಾಂತನಗೌಡ, ಬಿ. ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಮೇಯರ್ ವಿನಾಯಕ ಪೈಲ್ವಾನ್ ಭಾಗವಹಿಸುವರು. ಪರಿಷತ್ ಅಧ್ಯಕ್ಷ ಡಿ.ಸಿ. ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು ಎಂದರು.

ಸಂಜೆ 5.15ಕ್ಕೆ ಸಮಾರೋಪ ನಡೆಯಲಿದ್ದು, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಬಿ.ಪಿ. ಹರೀಶ್, ಬಸವರಾಜು ಶಿವಗಂಗಾ, ಮಾಜಿ ಮೇಯರ್ ಬಿ.ಜಿ. ಅಜಯಕುಮಾರ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದರು.

ಚಿತ್ರಸಂತೆಗೆ ಬರುವ ಕಲಾವಿದರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಮಾರ್ಚ್ 2ರಂದು ಚಿತ್ರಸಂತೆಯ ಹಂದರಗಂಬ ಪೂಜೆ ನಡೆಯಲಿದೆ. ಪ್ರತಿಯೊಬ್ಬ ಕಲಾವಿದರಿಗೂ ಪ್ರಮಾಣಪತ್ರ ನೀಡಲಾಗುವುದು. ಉತ್ತಮ ಚಿತ್ರ ಹಾಗೂ ಉತ್ತಮ ಮಳಿಗೆ ಸಿದ್ಧಪಡಿಸಿಕೊಂಡ 9 ಜನ ಕಲಾವಿದರಿಗೆ ಬಹುಮಾನ ನೀಡಲಾಗುವುದು ಎಂದು ಪರಿಷತ್ ಅಧ್ಯಕ್ಷ ಡಿ.ಸಿ. ಶ್ರೀನಿವಾಸ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪರಿಷತ್ನ ನಿರ್ದೇಶಕರಾದ ಸದಾನಂದ ಹೆಗಡೆ, ವಿಜಯಕುಮಾರ್ ಜಾಧವ್, ಗಣೇಶ ಆಚಾರ್, ಚೇತನಾ ಎಂ.ಎಸ್., ಶಿವಕುಮಾರ್ ಎ. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.