ಹೊನ್ನಾಳಿ: ‘ನೈರುತ್ಯ ಪದವೀಧರ ಕ್ಷೇತ್ರಕ್ಕೆ ಮತ್ತೊಮ್ಮೆ ಸ್ಪರ್ಧಿಸಲು ಇಚ್ಛಿಸಿದ್ದು, ನನ್ನ ಬಯಕೆಯನ್ನು ಪಕ್ಷದ ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಅವರ ಸೂಚನೆಯಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡಿದ್ದೇನೆ’ ಎಂದು ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು.

‘ನೈರುತ್ಯ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ನ್ಯಾಮತಿ, ಚನ್ನಗಿರಿ ಮತ್ತು ಮಾಯಕೊಂಡದ ಒಂದು ಹೋಬಳಿ ಬರುತ್ತದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಕಳೆದ ಬಾರಿಯ ಚುನಾವಣೆಯಲ್ಲಿ ಬಹುದೊಡ್ಡ ಅಂತರದಿಂದ ನನ್ನನ್ನು ಪದವೀಧರ ಕ್ಷೇತ್ರದ ಮತದಾರರು ಗೆಲ್ಲಿಸಿದ್ದಾರೆ. ನೌಕರರು, ಕಾರ್ಮಿಕರ ಪರವಾಗಿ ಹೋರಾಟ ಮಾಡಿ ಒಂದಿಷ್ಟು ಸಮಸ್ಯೆಗಳಿಗೆ ಪರಿಹಾರ ಕೊಡಿಸಿದ ತೃಪ್ತಿ ಇದೆ. ಕೆಲ ಸಂದರ್ಭದಲ್ಲಿ ಪಕ್ಷದ ನಿಯಮಗಳನ್ನು ಮೀರಿ ನೌಕರರ ಪರವಾಗಿ ಹೋರಾಟ ಮಾಡಿದ್ದೇನೆ. ಅವರಿಗೆ ನ್ಯಾಯ ಕೊಡಿಸುವಲ್ಲಿ ನಾನು ನನ್ನ ಹೋರಾಟ ಮುಂದುವರಿಸುತ್ತೇನೆ’ ಎಂದರು.

‘ಎನ್‍ಪಿಎಸ್ ರದ್ದುಗೊಳಿಸಿ, ಒಪಿಎಸ್ ಜಾರಿಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದು, ಮುಂದಿನ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದಕ್ಕೆ ಪರಿಹಾರ ನೀಡುವ ಭರವಸೆ ಇದೆ. ಅನುದಾನಿತ, ಅರೆ ಸರ್ಕಾರಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ಕುರಿತು ಸದನದಲ್ಲಿ ಧ್ವನಿ ಎತ್ತಿದ್ದು, ಇದಕ್ಕೆ ಮುಂದಿನ ದಿನಗಳಲ್ಲಿ ತಾರ್ಕಿಕ ಅಂತ್ಯ ಸಿಗುವ ವಿಶ್ವಾಸವಿದೆ’ ಎಂದು ಹೇಳಿದರು.

‘ಪೌರಕಾರ್ಮಿಕರು, ಅರಣ್ಯ ಸಿಬ್ಬಂದಿ ಸಮಸ್ಯೆಗಳಿಗೆ ಪರಿಹಾರ ಕೊಡಿಸಬೇಕಾಗಿದೆ. ಶೈಕ್ಷಣಿಕ ಸಾಲವನ್ನು ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ಈಶ್ವರನಾಯ್ಕ, ಎಚ್.ಎ. ಉಮಾಪತಿ, ಸಾಸ್ವೆಹಳ್ಳಿ ಕೃಷ್ಣಮೂರ್ತಿ, ಎಚ್.ಎ. ಗದ್ದಿಗೇಶ್, ಸಣ್ಣಕ್ಕಿ ಬಸವನಗೌಡ, ಬೇಲಿಮಲ್ಲೂರು ನರಸಪ್ಪ, ಪುಷ್ಪಾ ರವೀಶ್, ಉಪಾಧ್ಯಕ್ಷೆ ಆಶಾ, ಸುಮಾ, ಎಚ್.ಎ. ರಂಜಿತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.