ಕ್ಷಯ ರೋಗಕ್ಕೆ ಜಿಲ್ಲೆಯಲ್ಲಿ 132 ಜನರು ಪ್ರಾಣ ಕಳೆದುಕೊಂಡಿರುವುದು ವಿಪರ್ಯಾಸ. ಕ್ಷಯ ರೋಗ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು.
‘ಕ್ಷಯ ರೋಗ ನಿಯಂತ್ರಣದಲ್ಲಿ ಜಿಲ್ಲೆಯ ಸಾಧನೆ ತೃಪ್ತಿದಾಯಕವಾಗಿಲ್ಲ. ರಾಜ್ಯದ ಸರಾಸರಿಗಿಂತ ಹೆಚ್ಚು ಪ್ರಮಾಣದ ಸಾವು ಸಂಭವಿಸುತ್ತಿವೆ. ಜಗಳೂರು ಹಾಗೂ ದಾವಣಗೆರೆ ನಗರದಲ್ಲಿ ಕ್ಷಯ ರೋಗದ ಪ್ರಮಾಣ ಹೆಚ್ಚಾಗಿದೆ’ ಎಂದು ಹೇಳಿದರು.
‘ಕ್ಷಯ ರೋಗ ಯಾವ ಭಾಗದಲ್ಲಿ ಹೆಚ್ಚಾಗಿದೆ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ. ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿವಾರು ಪಟ್ಟಿಯನ್ನು ಹಿಡಿದು ರೋಗಿಗಳನ್ನು ಪತ್ತೆ ಮಾಡಿದರೆ ಸುಧಾರಣೆ ತರಬಹುದು’ ಎಂದು ಎನ್‌ಎಚ್‌ಎಂ ಅಭಿಯಾನ ನಿರ್ದೇಶಕ ಡಾ.ನವೀನ್ ಭಟ್ ತಿಳಿಸಿದರು.
ಗರ್ಭಿಣಿಯರ ನೋಂದಣಿಯಲ್ಲಿ ಲೋಪ ಉಂಟಾಗುತ್ತಿದೆ. ಗರ್ಭದಲ್ಲಿರುವ ಶಿಶುವಿಗೂ ವಿಶೇಷ ಗುರುತಿನ ಸಂಖ್ಯೆ ನೀಡಿದರೆ ಗರ್ಭಪಾತ ಪತ್ತೆ ಸುಲಭವಾಗುತ್ತದೆ.
ಡಾ.ಪ್ರಭಾ ಮಲ್ಲಿಕಾರ್ಜುನ್, ಸಂಸದೆ
ಜಗಳೂರು ತಾಲ್ಲೂಕು ಆಸ್ಪತ್ರೆ ಶಿಥಿಲಾವಸ್ಥೆಯಲ್ಲಿದೆ. ಅನಾಹುತ ಸಂಭವಿಸಬಹುದು ಎಂಬ ಆತಂಕ ಕಾಡುತ್ತಿದೆ. ಹೊಸ ಕಟ್ಟಡ ನಿರ್ಮಿಸಿದರೆ ಅನುಕೂಲವಾಗುತ್ತದೆ.