ದಾವಣಗೆರೆ: ನಗರದ ಎಸ್.ಎಸ್. ಬಡಾವಣೆಯ ನಿವಾಸಿ, ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ‘ಕಾಪರ್ ಏಜ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್’ನ ಮಾಲೀಕ ಶರತ್ ಜಿ.ಎನ್. (35) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶರತ್ ಅವರು ಹಲವು ಬಾರಿ ಐಎಎಸ್, ಕೆಎಎಸ್ ಪರೀಕ್ಷೆ ಬರೆದಿದ್ದರು. ಆ ಬಳಿಕ ಸ್ವಂತ ತರಬೇತಿ ಕೇಂದ್ರ ಆರಂಭಿಸಿದ್ದರು. ಸಾವಿರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಮೂಲಕ ಹೆಸರು ಗಳಿಸಿದ್ದರು. ವಿವಿಧ ಜಿಲ್ಲೆಗಳಲ್ಲಿ ಇವರ ಸಂಸ್ಥೆಯ ಶಾಖೆಗಳಿವೆ.

ಅವಿವಾಹಿತರಾಗಿದ್ದ ಶರತ್, ತಂದೆ – ತಾಯಿ ಕಾರ್ಯಕ್ರಮಕ್ಕೆಂದು ಹೊರಗಡೆ ಹೋಗಿದ್ದಾಗ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಐಎಎಸ್, ಐಪಿಎಸ್ನಲ್ಲಿ ನಿರೀಕ್ಷಿತ ಯಶಸ್ಸು ದೊರೆಯದ ಬಗ್ಗೆ ಕೊರಗಿತ್ತು. ಅದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪಾಲಕರು ತಿಳಿಸಿದ್ದಾರೆ. ಮನೆಯಲ್ಲಿ ಡೆತ್ನೋಟ್ ಪತ್ತೆಯಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು.

ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.