ದಾವಣಗೆರೆ: ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್(46) ಅವರು ಅಮರಾವತಿ ಬಳಿ ಚಲಿಸುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರಿಗೆ ಕೆಲ ದಿನಗಳಿಂದ ಶೀತ, ಜ್ವರ, ಕೆಮ್ಮು ಇದ್ದು, ಕೊರೊನಾ ಭಯದಿಂದ ನಲುಗುತ್ತಿದ್ದರು. ಟೆಸ್ಟ್ ಮಾಡಿಸಿ ಪಾಸಿಟಿವ್ ಬಂದ್ರೆ ಎಲ್ಲಿ ಇರೋದು, ಬೆಡ್, ವೆಂಟಿಲೇಟರ್, ಆಕ್ಸಿಜನ್ ಸಿಗುತ್ತಿಲ್ಲ. ಮುಂದೆ ಏನು ಎಂಬ ಚಿಂತೆಯಲ್ಲಿ ಪರಮೇಶ್ ಇದ್ದರು ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಅವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ಅವರು ವಿಜಯ ಕರ್ನಾಟಕ ಪತ್ರಿಕೆಗೆ ಅರೆಕಾಲಿಕ ವರದಿಗಾರರಾಗಿದ್ದರು.

ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದೂರು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.