ದಾವಣಗೆರೆ: ಬಿಜೆಪಿ ಮುಖಂಡ ಎಂ.ಪಿ.ರೇಣುಕಾಚಾರ್ಯ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ದೂರವಾಣಿ ಕರೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದಾರೆ.

‘ಸೋಮವಾರ ಮಧ್ಯಾಹ್ನ ಎರಡು ಬೇರೆ ಬೇರೆ ದೂರವಾಣಿ ಸಂಖ್ಯೆಯಿಂದ ಕರೆ ಮಾಡಿದ ಅನಾಮಧೇಯ ವ್ಯಕ್ತಿಯು ‘ಏಯ್, ನಿನ್ನ ಹಾಗೂ ನಿನ್ನ ಮಗನನ್ನು ಇವತ್ತು ರಾತ್ರಿಯೇ ಎತ್ತಿ ಬಿಡುತ್ತೇವೆ (ಕೊಲೆ ಮಾಡುತ್ತೇವೆ)’ ಎಂದು ಬೆದರಿಕೆ ಹಾಕಿದ್ದಾನೆ. ನೀನು ಯಾರು ಎಂದು ಪ್ರಶ್ನಿಸಿದ ಕೂಡಲೇ ಕರೆ ಕಟ್ ಮಾಡಿದ’ ಎಂದು ಎಂ.ಪಿ.ರೇಣುಕಾಚಾರ್ಯ ಅವರು ದೂರಿದ್ದಾರೆ.

‘ಈ ಹಿಂದೆಯೂ ನನಗೆ ಮತ್ತು ನನ್ನ ಕುಟುಂಬದವರಿಗೆ ಬೆದರಿಕೆ ಕರೆಗಳು ಬಂದಿದ್ದು, ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ’ ಎಂದು ತಿಳಿಸಿದ್ದಾರೆ.

‘ಪದೇ ಪದೇ ಕರೆ ಮಾಡಿ ಜೀವ ಬೆದರಿಕೆ ಹಾಕುತ್ತಿರುವ ಅನಾಮಧೇಯ ವ್ಯಕ್ತಿಗಳನ್ನು ಪತ್ತೆ ಮಾಡಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ನನಗೂ, ನನ್ನ ಕುಟುಂಬದವರಿಗೆ ಭದ್ರತೆ ಒದಗಿಸಬೇಕು’ ಎಂದು ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.