ದಾವಣಗೆರೆ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಸ ವಿಲೇವಾರಿ ಘಟಕ ನಿರ್ಮಿಸಲು ಜಿಲ್ಲಾಧಿಕಾರಿ ಮಂಜೂರು ಮಾಡಿದ್ದ ಭೂಮಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿದೆ ಎಂಬುದಾಗಿ ಅರಣ್ಯ ಇಲಾಖೆ ತಕರಾರು ವ್ಯಕ್ತಪಡಿಸಿದೆ. ಇದರಿಂದ ಜಿಲ್ಲೆಯ ನಾಲ್ಕು ಘಟಕಗಳ ನಿರ್ಮಾಣ ಕಾರ್ಯ ಹಲವು ದಿನಗಳಿಂದ ನನೆಗುದಿಗೆ ಬಿದ್ದಿದೆ.

ಸ್ವಚ್ಛ ಭಾರತ್ ಮಿಷನ್ ಅಡಿ ಜಿಲ್ಲೆಯ 194 ಗ್ರಾಮ ಪಂಚಾಯಿತಿಗಳಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣ ಕಾರ್ಯವನ್ನು ಜಿಲ್ಲಾ ಪಂಚಾಯಿತಿ ಕೈಗೆತ್ತಿಕೊಂಡಿದೆ. ಮೂಲದಲ್ಲಿಯೇ ಕಸ ವಿಂಗಡಿಸಿ, ಸಂಗ್ರಹಿಸಿ ವಿಲೇವಾರಿ ಮಾಡಿ ಗ್ರಾಮಗಳನ್ನು ತ್ಯಾಜ್ಯಮುಕ್ತಗೊಳಿಸುವುದು ಇದರ ಉದ್ದೇಶ. 148 ಗ್ರಾಮ ಪಂಚಾಯಿತಿಗಳಲ್ಲಿ ಘಟಕ ಕಾರ್ಯಾರಂಭಗೊಂಡಿವೆ. 39 ಘಟಕಗಳು ಪ್ರಗತಿ ಹಂತದಲ್ಲಿವೆ.

ಜಗಳೂರು ತಾಲ್ಲೂಕಿನ ಗುರುಸಿದ್ಧಾಪುರ, ಕಚ್ಚನಹಳ್ಳಿ, ಹೊನ್ನಾಳಿ ತಾಲ್ಲೂಕಿನ ಕಮ್ಮರಗಟ್ಟೆ ಹಾಗೂ ನ್ಯಾಮತಿ ತಾಲ್ಲೂಕಿನ ಯರಗನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಜಿಲ್ಲಾಧಿಕಾರಿ ಸರ್ಕಾರಿ ಭೂಮಿ ಮಂಜೂರು ಮಾಡಿದ್ದರು. ಉದ್ದೇಶಿತ ಭೂಮಿ ಮೀಸಲು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುತ್ತದೆ ಎಂಬುದಾಗಿ ಅರಣ್ಯ ಇಲಾಖೆ ವಿರೋಧ ವ್ಯಕ್ತಪಡಿಸಿದೆ.

ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾ್ಪ್ತಿಯಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ₹ 16.80 ಲಕ್ಷ ಅನುದಾನ ಮೀಸಲಿಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿ, ಜನಸಂಖ್ಯೆ ಹಾಗೂ ಸಂಗ್ರಹವಾಗುವ ಕಸದ ಪ್ರಮಾಣದ ಆಧಾರದ ಮೇರೆಗೆ ಘಟಕದ ಗಾತ್ರ ನಿರ್ಧಾರವಾಗುತ್ತದೆ. ಸರ್ಕಾರಿ ಭೂಮಿಯಲ್ಲಿ ಮಾತ್ರವೇ ಈ ಘಟಕವನ್ನು ಸ್ಥಾಪಿಸಲು ಅವಕಾಶವಿದೆ. ಕಸ ಸಂಗ್ರಹ, ವಿಲೇವಾರಿ ಹೊಣೆಯನ್ನು ಸ್ಥಳೀಯ ಸ್ತ್ರೀಶಕ್ತಿ ಸಂಘದ ಮಹಿಳೆಯರಿಗೆ ನೀಡಲಾಗಿದೆ.

‘ಕಸ ವಿಲೇವಾರಿ ಘಟಕಕ್ಕೆ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಭೂಮಿ ಒದಗಿಸಿದೆ. ಸರ್ಕಾರಿ ಭೂಮಿ ಲಭ್ಯ ಇಲ್ಲದ ಗ್ರಾಮ ಪಂಚಾಯಿತಿಗಳು ಪಕ್ಕದ ಪಂಚಾಯಿತಿ ಜೊತೆ ಒಡಂಬಡಿಕೆ ಮಾಡಿಕೊಂಡಿವೆ. ಎರಡು ಘಟಕಗಳ ನಿರ್ಮಾಣಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿದೆ. ಅರಣ್ಯ ಇಲಾಖೆಯ ಆಕ್ಷೇಪದಿಂದ ಕೆಲವೆಡೆ ಘಟಕ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ.ಇಟ್ನಾಳ್ ತಿಳಿಸಿದ್ದಾರೆ.

ಘನತ್ಯಾಜ್ಯ ಸಂಸ್ಕರಣಾ ಘಟಕಗಳು ಮೀಸಲು ಅರಣ್ಯ ಹಾಗೂ ಅರಣ್ಯ ಪ್ರದೇಶದ ಬಫರ್ ವಲಯದ ವ್ಯಾಪ್ತಿಗೆ ಬರುತ್ತವೆ ಎಂಬುದಾಗಿ ಅರಣ್ಯ ಇಲಾಖೆ ಆಕ್ಷೇಪಿಸಿದೆ. ಇದನ್ನು ನಿವಾರಿಸಿ ಘಟಕ ಕಾರ್ಯಾರಂಭಕ್ಕೆ ಪ್ರಯತ್ನಿಸಲಾಗುತ್ತಿದೆ
- ಸುರೇಶ್ ಬಿ.ಇಟ್ನಾಳ್ ಸಿಇಒ ಜಿಲ್ಲಾ ಪಂಚಾಯಿತಿ ದಾವಣಗೆರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.