ಹರಿಹರ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅವುಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಆಗ್ರಹಿಸಿ ನಗರಸಭೆ ಸದಸ್ಯರೇ ನಗರಸಭೆ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದ ಘಟನೆ ಶುಕ್ರವಾರ ನಡೆಯಿತು.

ನಗರಸಭಾ ಸದಸ್ಯ ದಾದಾ ಖಲಾಂದರ್, ಆರ್.ಸಿ.ಜಾವಿದ್, ಎಂ.ಆರ್.ಮುಜಮ್ಮಿಲ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಸದಸ್ಯ ದಾದಾ ಖಲಂದರ್ ಮಾತನಾಡಿ, ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಿಸಲು ಹಲವು ಬಾರಿ ಅಧಿಕಾರಿಗಳ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗದ ಕಾರಣ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸುತ್ತಿದ್ದೇವೆ ಎಂದರು.

‘ನಗರದ ಬಹುತೇಕ ವಾರ್ಡ್‌ಗಳಲ್ಲಿ ನಾಯಿಗಳ ಸಂಖ್ಯೆ ಅಧಿಕವಾಗಿದೆ. ಹಂದಿಗಳನ್ನು ನಾಯಿಗಳು ಬೇಟೆಯಾಡುತ್ತಿವೆ. ಅವುಗಳಿಗೆ ಆಹಾರ ಸಿಗದಿದ್ದರೆ ಮಕ್ಕಳು, ಹಿರಿಯ ನಾಗರಿಕರ ಮೇಲೆ ದಾಳಿ ಮಾಡುವ ಅಪಾಯವಿದೆ. ಈಚೆಗೆ ಬೆಂಗಳೂರಿನಲ್ಲಿ ನಾಯಿಗಳ ಹಿಂಡು ದಾಳಿ ಮಾಡಿದ ಪರಿಣಾಮ ವೃದ್ಧೆಯೊಬ್ಬರು ಮೃತಪಟ್ಟಿರುವ ನಿದರ್ಶನವಿದೆ’ ಎಂದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ಸುಬ್ರಹ್ಮಣ್ಯ ಶ್ರೇಷ್ಠಿ ಮಾತನಾಡಿ, ‘ಈಗಾಗಲೆ ನಾಯಿ ಹಿಡಿಯುವವರ ಜೊತೆ ಮಾತನಾಡಿದ್ದು, ಕೆಲವು ದಿನಗಳಲ್ಲಿ ಅವುಗಳನ್ನು ಹಿಡಿದು ದೂರಕ್ಕೆ ಬಿಡಲಾಗುವುದು ಎಂದರು. ಭರವಸೆ ನೀಡಿದ ನಂತರ ಕಚೇರಿಯ ಬೀಗ ತೆಗೆದು ಪ್ರತಿಭಟನೆ ಅಂತ್ಯಗೊಳಿಸಲಾಯಿತು.

ಕಾಂಗ್ರೆಸ್ ಮುಖಂಡ ದಾದಾಪೀರ್ ಭಾನುವಳ್ಳಿ, ರಹಮತ್ ಉರ್ ರಹಮಾನ್, ಆರೋಗ್ಯ ನೀರಿಕ್ಷಕ ಸಂತೋಷ್ ನಾಯ್ಕ ಸೇರಿದಂತೆ ಸಾರ್ವಜನಿಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.