ಜಗಳೂರು: ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ವಿಧಾನ ಪರಿಷತ್ ಚುನಾವಣೆ ಟಿಕೆಟ್ ನೀಡಬೇಕು ಎಂದು ತಾಲ್ಲೂಕು ಅದಿಜಾಂಬವ ಸಮಾಜ ಆಗ್ರಹಿಸಿದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ ಎಚ್.ಆಂಜನೇಯ ಅವರು ದೀನ ದಲಿತರ ಪರ, ಶೋಷಿತರ ಪರವಾಗಿ ಕೆಲಸ ಮಾಡಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಅವರ ಸೋಲಿನಿಂದ ರಾಜ್ಯದ ಶೋಷಿತ ವರ್ಗಕ್ಕೆ ಹಿನ್ನಡೆಯಾಗಿದೆ. ಪಕ್ಷ ನಿಷ್ಠೆಯನ್ನು ಗುರುತಿಸಿ, ಖಾಲಿಯಿರುವ 11 ವಿಧಾನ ಪರಿಷತ್ತಿನ ಸದಸ್ಯರ ಆಯ್ಕೆಗಾಗಿ ನಡೆಯಲಿರುವ ಚುನಾವಣೆಯಲ್ಲಿ ಆಂಜನೇಯ ಅವರಿಗೆ ಟಿಕೆಟ್ ನೀಡುವ ಮೂಲಕ ಸೂಕ್ತ ಸ್ಥಾನಮಾನ ಕಲ್ಪಿಸಬೇಕು’ ಎಂದು ಸಮಾಜದ ಮುಖಂಡ ಜಿ.ಎಚ್. ಶಂಭುಲಿಂಗಪ್ಪ ಆಗ್ರಹಿಸಿದರು.

‘ಮಾಜಿ ಸಚಿವ ಎಚ್.ಆಂಜನೇಯ ಅವರು ನಿಸ್ವಾರ್ಥ, ಸಮಾಜಮುಖಿ, ಸೈದ್ದಾಂತಿಕ ರಾಜಕಾರಣಿಯಾಗಿದ್ದು, ಪರಿಶಿಷ್ಟ ಸಮುದಾಯಗಳಿಗೆ ಎಸ್ಸಿಪಿ, ಟಿಎಸ್ಪಿ ಕಾಯ್ದೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಶೋಷಿತ ಸಮುದಾಯಗಳ ಅಭಿವೃದ್ದಿಗೆ ಕಾರಣಕರ್ತರಾಗಿದ್ದಾರೆ. ಅವರಿಗೆ ಮೇಲ್ಮನೆ ಪ್ರವೇಶಕ್ಕೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪಕ್ಷದ ಕಾರ್ಮಿಕ ಘಟಕದ ರಾಜ್ಯಪ್ರಧಾನ ಕಾರ್ಯದರ್ಶಿ ಗುತ್ತಿದುರ್ಗ ರುದ್ರೇಶ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ದೊಣೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮರೇನಹಳ್ಳಿ ತಿಪ್ಪೇಸ್ವಾಮಿ, ಹಟ್ಟಿ ತಿಪ್ಪೇಸ್ವಾಮಿ, ಹನುಮಂತಾಪುರ ಶಿವಕುಮಾರ್, ಮಾರುತಿ ಸಿ.ಎಂ.ಹೊಳೆ, ಮಲೆಮಾಚಿಕೆರೆ ಸತೀಶ್, ಹಾಲೇಶ್, ರೇಣುಕೇಶ್, ದೊಣೆಹಳ್ಳಿ ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.