ದಾವಣಗೆರೆ: ರಾಜ್ಯದಲ್ಲಿ ಭೂಒಡೆತನ, ಮೀಸಲಾತಿ ಸೌಲಭ್ಯ ಕಲ್ಪಿಸಿ ಶೋಷಿತ ಸಮುದಾಯಗಳಿಗೆ ಅಸ್ಮಿತೆಯನ್ನು ತಂದುಕೊಟ್ಟ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.

ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚಣೆ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಉಳುವವನೆ ಭೂಮಿಯ ಒಡೆಯ ಕಾಯ್ದೆ ರಾಜ್ಯದ ಹಲವು ಜನರಿಗೆ ಭೂಒಡೆತನದ ಹಕ್ಕು ನೀಡಿತು. ನಿರುದ್ಯೋಗಿಗಳಿಗೆ ಸಹಾಯಧನದಂತಹ ಕಾರ್ಯಕ್ರಮಗಳನ್ನು ರೂಪಿಸಿ ಸಾವಿರಾರು ಯುವಜನರಿಗೆ ನೆರವಾದರು. ಜೀತ ಪದ್ಧತಿ, ಮಲಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದರು. ಸಮಾಜಮುಖಿ ಕಾರ್ಯಗಳತ್ತ ಅವರ ಮನಸು ಸದಾ ತುಡಿಯುತ್ತಿತ್ತು’ ಎಂದು ಹೇಳಿದರು.

‘ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಏಳಿಗೆಗೆ ಅರಸು ಸಾಕಷ್ಟು ಶ್ರಮಿಸಿದರು. ಅರಸು ರೂಪಿಸಿದ ಮಾರ್ಗದಲ್ಲಿಯೇ ರಾಜ್ಯ ಸರ್ಕಾರ ಸಾಗುತ್ತಿದೆ. ಅಭಿವೃದ್ಧಿ ನಿಗಮದ ಮೂಲಕ ಆಶಕ್ತರಿಗೆ ಸಾಲಸೌಲಭ್ಯ, ಕೃಷಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಶಿಕ್ಷಣಕ್ಕೆ ಆದ್ಯತೆ ನೀಡಲು 2,434 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರ ರೂಪಿಸಿದ ಸೌಲಭ್ಯಗಳನ್ನು ಹಿಂದುಳಿದ ಸಮುದಾಯ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಶಾಸಕ ಕೆ.ಎಸ್.ಬಸವಂತಪ್ಪ, ‘ದೇವರಾಜ ಅರಸು ಅವರು ಹಲವು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೊಳಿಸಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಅನುಕೂಲ ಮಾಡಿಕೊಟ್ಟರು. ದಕ್ಷ ಆಡಳಿತಗಾರ ಆಗಿದ್ದ ಅವರು ಎಲ್.ಜಿ.ಹಾವನೂರು ವರದಿ ಜಾರಿಗೊಳಿಸಿ ಸಣ್ಣ, ಶೋಷಿತ ಸಮುದಾಯಕ್ಕೆ ನೆರವಾದರು. ಉಳುವವನೆ ಭೂಮಿ ಒಡೆಯ ಕಾಯ್ದೆಯ ಪರಿಣಾಮವಾಗಿ ಚಿಕ್ಕ ಸಮುದಾಯ ಭೂಮಿ ಹೊಂದಲು ಸಾಧ್ಯವಾಗಿದೆ. ಇದೇ ಮಾರ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಗುತ್ತಿದ್ದಾರೆ. ಇವರಿಗೆ ಮಸಿ ಬಳಿಯಲು ಕೆಲವು ಶಕ್ತಿಗಳು ಮುಂದಾಗಿವೆ. ಇದರಲ್ಲಿ ಯಶಸ್ಸು ಕಾಣಲು ಸಾಧ್ಯವಿಲ್ಲ’ ಎಂದು ಹೇಳಿದರು.

ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಮಲ್ಲಿಕಾರ್ಜುನ ಕಲಮರಹಳ್ಳಿ ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೃಷ್ಣಾ ನಾಯ್ಕ, ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಹುಲ್ಮನಿ ತಿಮ್ಮಣ್ಣ, ಅಲೆಮಾರಿ ಒಕ್ಕೂಟದ ಅಧ್ಯಕ್ಷ ತಿಪ್ಪಣ್ಣ, ಮುಖಂಡರಾದ ಎಸ್.ಮಲ್ಲಿಕಾರ್ಜುನ, ಏಕಾಂತಪ್ಪ ಇದ್ದರು.

ಅರಸು ಅವರ ಪರಿಶ್ರಮದಿಂದ ಹೆಣ್ಣುಮಕ್ಕಳು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಭೂಸುಧಾರಣಾ ಕಾಯ್ದೆ ಜಾರಿಗೊಳಿಸಿ ಮಾದರಿಯಾಗಿದ್ದಾರೆ. ಆರ್ಥಿಕ ಅಸಮಾನತೆ ನಿವಾರಣೆಗೆ ಶ್ರಮಿಸಿದರು.
–ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾಧಿಕಾರಿ

ಜಿಲ್ಲೆಗೆ 8 ಹೊಸ ವಿದ್ಯಾರ್ಥಿನಿಲಯಗಳು ಮಂಜೂರಾಗಿವೆ. ಇವು ಪ್ರಸಕ್ತ ವರ್ಷದಿಂದಲೇ ಕಾರ್ಯಾರಂಭ ಆಗಿದ್ದು, ಅರ್ಜಿ ಸಲ್ಲಿಸಿದ ಎಲ್ಲ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ಸಿಕ್ಕಿದೆ.
–ಕೆ.ಎಚ್.ಗಾಯತ್ರಿ, ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.