ದಾವಣಗೆರೆ: ‘ರಾಜ್ಯದ ರೈತರಿಗೆ ಬರ ಪರಿಹಾರ ನೀಡುವಲ್ಲಿ ತಾರತಮ್ಯವೆಸಗಿದ್ದು, ರೈತರಿಗೆ ಅನ್ಯಾಯವಾಗಿದೆ’ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಬಲ್ಲೂರ್ ರವಿಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಒಂದು ಎಕರೆಗೆ ₹ 50,000ದಷ್ಟು ಖರ್ಚು ಮಾಡಿದ್ದು, ಆದರೆ ಸರ್ಕಾರ ಎಕರೆಗೆ ₹ 3,000 ಪರಿಹಾರ ನೀಡಿರುವುದು ಎಷ್ಟರಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ.

‘ತೋಟಗಾರಿಕಾ ಬೆಳೆಗಳಾದ ಅಡಿಕೆ, ತೆಂಗು, ಬಾಳೆ, ಎಲೆ ಬಳ್ಳಿಗಳಿಗೆ ಲಕ್ಷಾಂತರ ರೂಪಾಯಿ ಖರ್ಚು ಆಗಿದ್ದು, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕೊಳವೆ ಬಾವಿ ಕೊರೆಸಿದ್ದು, ಅಂತರ್ಜಲ ಕುಸಿದು ಬೆಳೆಗಳು ಹಾಳಾಗಿವೆ. ಈ ಬೆಳೆಗಳಿಗೆ ಎಕರೆಗೆ ಕನಿಷ್ಠ ₹25,000 ನೀಡಬೇಕಾಗಿತ್ತು. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಒಳ ಜಗಳದಿಂದಾಗಿ ರೈತನಿಗೆ ಮೋಸವಾಗಿದೆ. ಈ ಮೋಸಕ್ಕೆ ಒಂದಲ್ಲ ಒಂದು ದಿನ ದಂಡ ತರಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

ಕೂಡಲೇ ಬೆಳೆ ಪರಿಹಾರ ತಾರತಮ್ಯವನ್ನು ಸರಿಪಡಿಸಿ ಸಮರ್ಪಕವಾಗಿ ಪರಿಹಾರ ನೀಡಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.