ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಂಡವಾಳಶಾಹಿ ಪರ ನೀತಿಗಳಿಂದಾಗಿ ಜನರ ಬದುಕು ಬೀದಿಗೆ ಬಂದಿದೆ ಎಂದು ಎಸ್‌ಯುಸಿಐ (ಸಿ) ರಾಜ್ಯ ಕಾರ್ಯದರ್ಶಿ ಕೆ. ಉಮಾ ಆರೋಪಿಸಿದರು.

ನಗರದ ಉಪವಿಭಾಗಾಧಿಕಾರಿ ಕಚೇರಿ ಮುಂಭಾಗ ಪಕ್ಷದ ಅಭ್ಯರ್ಥಿ ಅಣಬೇರು ತಿಪ್ಪೇಸ್ವಾಮಿ ಅವರ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ದೇಶದಲ್ಲಿ ಅತಿ ದಿನ 7,000ಕ್ಕೂ ಹೆಚ್ಚು ಜನ ಸಾಯುತ್ತಿದ್ದಾರೆ. ಹಾವೇರಿಯ ಯುವಕನೊಬ್ಬ ತಾಯಿಯ ಹಸಿವು ನೀಗಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನವದೆಹಲಿಯಲ್ಲಿ ಮಕ್ಕಳು ಹಸಿವೆಯಿಂದ ಸಾಯುತ್ತಿದ್ದರೂ, ತಾಯಿಯೊಬ್ಬರು 'ನನಗೆ ಊಟ ಕೊಡಿ' ಎಂದು ಅಂಗಲಾಚುತ್ತಿದ್ದಳು. ಜನರ ಈ ಹಸಿವಿನ ಕೂಗು ಪ್ರಧಾನಿ ಮೋದಿಯವರಿಗೆ ಕೇಳಿಸದೆ’ ಎಂದು ಪ್ರಶ್ನಿಸಿದರು.

‘ಎನ್‌ಡಿಎ’, ‘ಇಂಡಿಯಾ’ ಮೈತ್ರಿ ಕೂಟಗಳು ಅಬ್ಬರದ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು, ಇವರು ಯಾರೂ ದೇಶದ ಜನರ ಬದುಕಿನ ಸಮಸ್ಯೆಗಳ ಕುರಿತು ಮಾತನಾಡುತ್ತಿಲ್ಲ. ಅಧಿಕಾರಕ್ಕಾಗಿ ಚುನಾವಣೆ ನಡೆಸುತ್ತಿದ್ದಾರೆ. ಬಿಜೆಪಿ ಸೋಲಿಸಲು ಕಾಂಗ್ರೆಸ್ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟ ರಚನೆಯಾಗಿದ್ದು, ಎಡ ಪಕ್ಷಗಳಾದ ಸಿಪಿಐ, ಸಿಪಿಐಎಂ ಕೂಡ ಈ ಒಕ್ಕೂಟ ಸೇರಿವೆ. ಆದರೆ, ಬಹುಕಾಲ ದೇಶವನ್ನಾಳಿದ ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರುವ ಮೂಲಕ ಜನರ ಪ್ರಜಾತಾಂತ್ರಿಕ ಹಕ್ಕುಗಳನ್ನು ಕಸಿದಿದೆ. ಅಂದಿನ ಕಾಂಗ್ರೆಸ್ಸಿನ ನೀತಿಗಳನ್ನೇ ಇಂದು ಬಿಜೆಪಿಯು ಮುಂದುವರಿಸುತ್ತಿದೆ’ ಎಂದು ಆರೋಪಿಸಿದರು.

‘ಮೋದಿಯವರು ಭೇಟಿ ಬಚಾವೋ ಎಂದು ಭಾಷಣದಲ್ಲಿ ಹೇಳುತ್ತಾರೆ. ಆದರೆ ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಲೆ ಮಾಡಿದಾಗ, ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಬಂದಾಗ, ಬಿಲ್ಕೀಸ್ ಬಾನು ಪ್ರಕರಣದ 11 ಆರೋಪಿಗಳನ್ನು ಬಿಡುಗಡೆ ಮಾಡಿದ ಸಂದರ್ಭ ಎಲ್ಲಿದೆ ಭೇಟಿ ಬಚಾವೋ’? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಅಭ್ಯರ್ಥಿ ಅಣಬೇರು ತಿಪ್ಪೇಸ್ವಾಮಿ ಮತಯಾಚಿಸಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾರ್ಯದರ್ಶಿ ಮಂಜುನಾಥ್ ಕೈದಾಳೆ ವಹಿಸಿದ್ದರು. ರಾಜ್ಯ ಸಮಿತಿ ಸದಸ್ಯರಾದ ಅಪರ್ಣಾ ಬಿ. ಆರ್, ಜಿಲ್ಲಾ ಸಮಿತಿ ಸದಸ್ಯರಾದ ಮಧು ತೊಗಲೇರಿ, ಮಂಜುನಾಥ್ ಕುಕ್ಕವಾಡ, ಟಿವಿಎಸ್ ರಾಜು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.