ದಾವಣಗೆರೆ: ತಾಲ್ಲೂಕಿನ ಮೆಳ್ಳೆಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಶಿಕ್ಷಕಿಯನ್ನು ಮಂಗಳವಾರ ಅಮಾನತು ಮಾಡಲಾಗಿದೆ.

ಶಾಲೆಯ ಮುಖ್ಯ ಶಿಕ್ಷಕಿ ಜೊತೆಗಿದ್ದ ಮನಸ್ತಾಪದ ಕಾರಣಕ್ಕೆ ಶಿಕ್ಷಕಿ ಸಿ.ಕೆ. ಸಾವಿತ್ರಮ್ಮ ಅವರು ಸೋಮವಾರ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿ, ಅದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು.

ವಿದ್ಯಾರ್ಥಿನಿಯರು ಬಕೆಟ್, ಕಸಪೊರಕೆ ಹಿಡಿದು ಶೌಚಾಲಯ ಸ್ವಚ್ಛಗೊಳಿಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ.

ಶಾಲಾ ಶಿಕ್ಷಣ ಇಲಾಖೆಯು ಪ್ರಾಥಮಿಕ ತನಿಖೆ ನಡೆಸಿದ ಸಂದರ್ಭ ಉದ್ದೇಶಪೂರ್ವಕ ಕೃತ್ಯ ಎಂಬುದು ದೃಢಪಟ್ಟಿದ್ದರಿಂದ ಅವರನ್ನು ಅಮಾನತು ಮಾಡಲಾಗಿದೆ.

ಶಾಲೆಯಲ್ಲಿ ಅತಿಯಾಗಿ ಮೊಬೈಲ್ ಬಳಸುವುದು, ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಕುಟುಂಬದವರಿಂದ ಮಾಡಿಸುವುದು ಸೇರಿದಂತೆ ಇನ್ನಿತರ ಅಂಶಗಳನ್ನು ಉಲ್ಲೇಖಿಸಿ ಮುಖ್ಯ ಶಿಕ್ಷಕಿ ಎ.ಶೋಭಾ ಅವರು ಶಿಕ್ಷಕಿ ಸಾವಿತ್ರಮ್ಮ ಅವರಿಗೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿದ್ದರು. ಇದೇ ಕಾರಣಕ್ಕೆ ಮನಸ್ತಾಪ ಉಂಟಾಗಿ, ಅವರು ಮುಖ್ಯಶಿಕ್ಷಕಿ ವಿರುದ್ಧ ಹುನ್ನಾರ ನಡೆಸಿದ್ದರು ಎಂದು ಮೂಲಗಳು ತಿಳಿಸಿವೆ.

ದಾವಣಗೆರೆ ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಶೇರ್ ಅಲಿ ಹಾಗೂ ಸಿಬ್ಬಂದಿ ಶಾಲೆಗೆ ಭೇಟಿ ನೀಡಿ ಗ್ರಾಮಸ್ಥರು, ಎಸ್ಡಿಎಂಸಿ ಸದಸ್ಯರೊಂದಿಗೆ ಸಭೆ ನಡೆಸಿ ಮಾಹಿತಿ ಸಂಗ್ರಹಿಸಿದಾಗ, ‘ಶಿಕ್ಷಕಿ ಸಾವಿತ್ರಮ್ಮ ಅವರೇ ಶೌಚಾಲಯ ಸ್ವಚ್ಛಗೊಳಿಸಲು ತಿಳಿಸಿದ್ದರು’ ಎಂದು ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದರು.

‘ನನ್ನ ಮೇಲಿನ ಮನಸ್ತಾಪದಿಂದ ಶಿಕ್ಷಕಿಯೇ ಈ ರೀತಿ ಮಾಡಿದ್ದಾರೆ’ ಎಂದು ಮುಖ್ಯ ಶಿಕ್ಷಕಿ ಶೋಭಾ ದೂರಿದ್ದಾರೆ.

‘ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸುವಂತೆ ಮುಖ್ಯ ಶಿಕ್ಷಕಿಯೇ ಸೂಚಿಸಿದ್ದರು. ಅವರೇ ಪೊರಕೆ, ಸೋಪಿನಪುಡಿ ತರಿಸಿದ್ದರು. ಅವರ ಸೂಚನೆ ಮೇರೆಗೆ ಶೌಚಾಲಯ ಸ್ವಚ್ಛಗೊಳಿಸಲಾಗಿತ್ತು’ ಎಂದು ಶಿಕ್ಷಕಿ ಸಾವಿತ್ರಮ್ಮ ಹೇಳಿದ್ದಾರೆ.

ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿ ಕರ್ತವ್ಯಲೋಪ ಎಸಗಿರುವ ಶಿಕ್ಷಕಿಯನ್ನು ಇಲಾಖಾ ವಿಚಾರಣೆ ಬಾಕಿ ಇಟ್ಟು ಅಮಾನತುಗೊಳಿಸಲಾಗಿದೆ

-ಸುರೇಶ ಬಿ. ಇಟ್ನಾಳ್ ಸಿಇಒ ಜಿಲ್ಲಾ ಪಂಚಾಯಿತಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.