ಹೊನ್ನಾಳಿ: ಪಟ್ಟಣದ ಸರ್ವರಕೇರಿಯಲ್ಲಿರುವ ಶ್ರೀ ಕಾಳಿಕಾಂಬ ಎಂಟರ್‌ಪ್ರೈಸಸ್ ಪೇಪರ್ ಕಪ್ ಮತ್ತು ಪೇಪರ್ ಪ್ಲೇಟ್ ತಯಾರಿಕಾ ಘಟಕದಲ್ಲಿ ಭಾನುವಾರ ರಾತ್ರಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ₹ 20 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಘಟಕ ಸಂಪೂರ್ಣ ಸುಟ್ಟು ಕರಕಲಾಗಿತ್ತು ಎಂದು ದೂರುದಾರರು ತಿಳಿಸಿದ್ದಾರೆ.

ಈ ಘಟಕವನ್ನು ತಾತ್ಕಾಲಿಕವಾಗಿ ನಿರ್ಮಿಸಿದ ತಗಡಿನ ಶೆಡ್‌ನಲ್ಲಿ ನಡೆಸಲಾಗುತ್ತಿತ್ತು. ಘಟಕದಲ್ಲಿದ್ದ ಪೇಪರ್ ಕಪ್, ಪ್ಲೇಟ್, ಯಂತ್ರಗಳು, ಕಚ್ಚಾ ಸಾಮಗ್ರಿ, ಪೇಪರ್ ರೋಲ್‌ಗಳು, ಕಂಪ್ಯೂಟರ್, ಪ್ಲಾಸ್ಟಿಕ್ ಕವರ್, ಪೀಠೋಪಕರಣಗಳು ಸುಟ್ಟು ಕರಕಲಾಗಿವೆ ಎಂದು ಘಟಕದ ಮಾಲೀಕ ಬಿ.ಟಿ.ಮಮತಾ ರಾಜಪ್ಪ ದೂರಿನಲ್ಲಿ ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎನ್ನಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.