ದಾವಣಗೆರೆ: ಪಕ್ಷದ ಭಿನ್ನಮತಿಯರಿಗೆ ಕೇಂದ್ರದ ವರಿಷ್ಠರು ಕಡಿವಾಣ ಹಾಕದೇ ಇದ್ದರೆ ಮೌನ ಮುರಿಯಬೇಕಾಗುತ್ತದೆ. ‘ವಕ್ಫ್’ ವಿರುದ್ಧ ಪ್ರತ್ಯೇಕ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.

‘ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾದ ಬಳಿಕ ಪಕ್ಷಕ್ಕೆ ಹೊಸ ಹುರುಪು ಸಿಕ್ಕಿದೆ. ಅವರ ರಾಜಕೀಯ ಬೆಳವಣಿಗೆ ಸಹಿಸದ ಕೆಲವರು ಭಿನ್ನಮತಿಯ ಚಟುವಟಿಕೆ ನಡೆಸುತ್ತಿದ್ದಾರೆ. ‘ವಕ್ಫ್’ ವಿರುದ್ಧ ಪ್ರತ್ಯೇಕ ಹೋರಾಟ ಮಾಡಲು ಮುಂದಾಗಿರುವವರಿಗೆ ವರಿಷ್ಠರು ಬುದ್ದಿಹೇಳಬೇಕು’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

‘ಬೆಳಗಾವಿ ಅಧಿವೇಶನಕ್ಕೂ ಮುನ್ನ ‘ವಕ್ಫ್’ ಹೋರಾಟವನ್ನು ತೀವ್ರಗೊಳಿಸಲು ಪಕ್ಷ ನಿರ್ಧರಿಸಿದೆ. ಮೂರು ತಂಡಗಳನ್ನು ರಚಿಸಿ ಹೋರಾಟದ ರೂಪುರೇಷ ಸಿದ್ಧಪಡಿಸಿದೆ. ರಾಜ್ಯ ಘಟಕದ ಅಧ್ಯಕ್ಷರ ನಿರ್ಣಯಕ್ಕೆ ಬದ್ಧವಾಗಿ ಎಲ್ಲರೂ ಕೆಲಸ ಮಾಡಬೇಕು. ಪ್ರತ್ಯೇಕ ಸಭೆ ಹಾಗೂ ಪರ್ಯಾಯ ಹೋರಾಟಕ್ಕೆ ಅವಕಾಶವಿಲ್ಲ’ ಎಂದು ಬಸನಗೌಡ ಪಾಟೀಲ ಯತ್ನಾಳ್ ಹೆಸರು ಉಲ್ಲೇಖಿಸದೇ ವಾಗ್ದಾಳಿ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.