ಹೊನ್ನಾಳಿ: ಪಟ್ಟಣದ ದೇವನಾಯಕನಹಳ್ಳಿ ಸಮೀಪದ ಏಲಕ್ಕಿ ಕೇರಿಯಲ್ಲಿ ವಾಸ ಮಾಡುತ್ತಿರುವ ಇಬ್ಬರು ಯುವಕರನ್ನು ಮಾದಕ ವಸ್ತು ಗಾಂಜಾ ಸೇವನೆ ಆರೋಪದ ಮೇಲೆ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಸಿಪಿಐ ಸುನೀಲ್‌ಕುಮಾರ್ ತಿಳಿಸಿದ್ದಾರೆ.

ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಯುವಕರಾದ ಮಂಜುನಾಥ್ ಹಾಗೂ ಜೀವನ್ ಅಮಲಿನಲ್ಲಿ ಓಡಾಡುತ್ತಿದ್ದರು. ಅನುಮಾನದ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿತ್ತು. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ, ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ರಾಜ್‌ಕುಮಾರ್ ವರದಿ ನೀಡಿದ್ದರಿಂದ ಯುವಕರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು.

ಪೇಂಟಿಂಗ್ ಕೆಲಸ ಮಾಡುತ್ತಿದ್ದ ಯುವಕರಿಗೆ ಮಾದಕ ವಸ್ತು ಎಲ್ಲಿಂದ ಬಂತು ಎನ್ನುವ ಬಗ್ಗೆ ಹೆಚ್ಚಿನ ವಿಚಾರಣೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಜೂಜಾಟ–ದಾಳಿ: ತಾಲ್ಲೂಕಿನ ನೆಲಹೊನ್ನೆ ಗ್ರಾಮದಲ್ಲಿ ಕರಿಯಮ್ಮ ದೇವಸ್ಥಾನದ ಹತ್ತಿರದ ಕಳೆದ ಶುಕ್ರವಾರ ಮಟ್ಕಾ ಆಡಿಸಲು ಶಬ್ಬೀರ್ ಖಾನ್ ಎಂಬಾತ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದಾನೆ ಎಂಬ ಆರೋಪದ ಮೇಲೆ ದಾಳಿ ನಡೆಸಿದ ಪೊಲೀಸರು ₹4,740 ನಗದು ಜಪ್ತಿ ಮಾಡಿ ದೂರು ದಾಖಲಿಸಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.