ಜಗಳೂರು: ‘ಬರಪೀಡಿತ ತಾಲ್ಲೂಕಿನ ಮಹತ್ವದ ನೀರಾವರಿ ಯೋಜನೆಗಳಾದ ಭದ್ರಾ ಮೇಲ್ದಂಡೆ ಮತ್ತು 57 ಕೆರೆ ತುಂಬಿಸುವ ಯೋಜನೆಗಳನ್ನು ತ್ವರಿತಗತಿಯಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ’ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.

ಪಟ್ಟಣದಲ್ಲಿ ಈಚೆಗೆ ಕಾಂಗ್ರೆಸ್ ಹಮ್ಮಿಕೊಂಡಿದ್ದ ಶಾಸಕರಿಗೆ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಿರಿಗೆರೆ ಶ್ರೀಗಳ ಒತ್ತಾಸೆಯಿಂದ ರೂಪುಗೊಂಡ 57 ಕೆರೆ ತುಂಬಿಸುವ ಯೋಜನೆಯನ್ನು ಬಜೆಟ್ನಲ್ಲಿ ಸೇರ್ಪಡೆಗೊಳಿಸಿ ಅನುದಾನ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಈಗಲೂ ಮುಖ್ಯಮಂತ್ರಿಯಾಗಿದ್ದಾರೆ. ಇದರಿಂದ ಯೋಜನೆಯ ತ್ವರಿತಗತಿಯ ಜಾರಿಗೆ ಸಹಾಯವಾಗಲಿದೆ. ನಮ್ಮ ರೈತರ ಬದುಕು ಹಸನಾಗಲಿದೆ ಎಂದು ಹೇಳಿದರು.

ಕೆಪಿಸಿಸಿ ಕಾರ್ಯದರ್ಶಿ ಅಸಗೋಡು ಜಯಸಿಂಹ, ಕೆಪಿಸಿಸಿ ಎಸ್.ಟಿ. ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್ ಮಾತನಾಡಿದರು.

ಮುಖಂಡರಾದ ಡಾ. ಉದಯಶಂಕರ್ ಒಡೆಯರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹ್ಮದ್, ಮಂಜುನಾಥ್, ಜಯದೇವನಾಯ್ಕ, ಸಿ. ತಿಪ್ಪೇಸ್ವಾಮಿ, ಶೇಖರಪ್ಪ, ಸುಧೀರ್ ರೆಡ್ಡಿ, ತಿಮ್ಮಾರೆಡ್ಡಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.