ದಾವಣಗೆರೆ:ತಾಲ್ಲೂಕಿನ ಎಲೆಬೇತೂರು ಗ್ರಾಮದಲ್ಲಿ ಶುಕ್ರವಾರ ಆಯುಷ್ಮಾನ್ ಭಾರತ್ ಕಾರ್ಡ್ ಮತ್ತು ರೈತರ ಬೆಳೆ ಸಾಲಮನ್ನಾ ಪತ್ರಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿವೆ.

ಇಲ್ಲಿನಅಂಚೆ ಕಚೇರಿಯಿಂದ 100 ಮೀಟರ್ ದೂರದ ಕಸದ ತೊಟ್ಟಿಯಲ್ಲಿ 1000 ಪತ್ರಗಳು ದೊರೆತಿದೆ. ಅಂಚೆ ಕಚೇರಿ ಮೂಲಕ ಫಲಾನುಭವಿಗಳಿಗೆ ತಲುಪಿಸಬೇಕಾಗಿದ್ದ ಪತ್ರಗಳು ಕಸದ ತೊಟ್ಟಿಯಲ್ಲಿ ಪತ್ತೆಯಾಗಿರುವುದು ಅನುಮಾನಕ್ಕೆ ಎಡೆಮಾಡಿದೆ.

ಸರ್ಕಾರದಿಂದ ಕಳೆದ ಡಿಸೆಂಬರ್, ಜನವರಿಯಲ್ಲಿ ಈ ಪತ್ರಗಳು ಬಂದಿದ್ದವು. ಅಂಚೆ ಇಲಾಖೆಯವರು ಅವುಗಳನ್ನು ಜನರಿಗೆ ವಿತರಿಸದೆ ಹಾಗೆಯೇ ಇಟ್ಟುಕೊಂಡಿದ್ದರು ಎಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದತಹಶೀಲ್ದಾರ್ ಗಿರೀಶ್ ಭೇಟಿ ನೀಡಿ ಕಾರ್ಡ್ಗಳನ್ನು ವಶಕ್ಕೆ ಪಡೆದರು.

‘ಇದರಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಪೋಸ್ಟ್ಮ್ಯಾನ್ ಹಾಗೂ ಆತನ ಸಹಾಯಕನ ವಿರುದ್ಧ ಪ್ರಕರಣ ದಾಖಲಿಸಲು ಪಿಡಿಒ ಮತ್ತು ಕಂದಾಯ ನಿರೀಕ್ಷಕರಿಗೆ ಸೂಚನೆ ನೀಡಿದ್ದೇನೆ’ ಎಂದು ತಹಶೀಲ್ದಾರ್ ಗಿರೀಶ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.