ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರೊಂದಿಗೆ ಶೀಘ್ರದಲ್ಲಿಯೇ ಬೆಂಗಳೂರಿಗೆ ತೆರಳಿ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಆಸ್ಪತ್ರೆಯ ನೂತನ ಕಟ್ಟಡಗಳ ಉದ್ಘಾಟನಾ ದಿನಾಂಕ ಗೊತ್ತುಪಡಿಸಲಾಗುವುದು.
ಡಾ.ಎಂ.ಬಿ. ನಾಗೇಂದ್ರಪ್ಪ, ಅಧೀಕ್ಷಕರು, ಚಿಗಟೇರಿ ಜಿಲ್ಲಾ ಆಸ್ಪತ್ರೆ ದಾವಣಗೆರೆ
ತುರ್ತು ಚಿಕಿತ್ಸಾ ಕೇಂದ್ರದ ನಿರ್ಮಾಣ ಸ್ಥಳ ಹಾಗೂ ವಿನ್ಯಾಸದಲ್ಲಿನ ಗೊಂದಲಗಳ ಕಾರಣ ಕಾಮಗಾರಿ ಆರಂಭ ತಡವಾಯಿತು. ಪ್ರಸ್ತುತ ವೈದ್ಯಕೀಯ ಉಪಕರಣ ಹಾಗೂ ಅನಿಲ ಪೂರೈಕೆ ಪೈಪ್‌ಲೈನ್ ಅಳವಡಿಕೆ ಕೆಲಸ ನಡೆಯುತ್ತಿದೆ.
ಹೇಮಂತ್ ಕೆ.ಜಿ.ಡಿ, ಸಹಾಯಕ ಎಂಜಿನಿಯರ್, ಸ್ಮಾರ್ಟ್ ಸಿಟಿ
ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸ್ಮಾರ್ಟ್ ಸಿಟಿ ಅಡಿ ನಿರ್ಮಿಸಿರುವ ತುರ್ತು ಚಿಕಿತ್ಸಾ ಕೇಂದ್ರದ ನೂತನ ಕಟ್ಟಡ –ಪ್ರಜಾವಾಣಿ ಚಿತ್ರ/ ಸತೀಶ್ ಬಡಿಗೇರ