ಹೊನ್ನಾಳಿ: ‘ನಾನು ಈ ಹಿಂದೆ ಭರವಸೆ ನೀಡಿದಂತೆ ತಾಲ್ಲೂಕಿನ ಅರಬಗಟ್ಟೆ ಗ್ರಾಮದ ರಾಜಕಾಲುವೆಗೆ ₹ 1.50 ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಿಸುತ್ತಿದ್ದು ಕಾಮಗಾರಿ ಪ್ರಗತಿಯಲ್ಲಿದೆ’ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಗುರುವಾರ ತಾಲ್ಲೂಕಿನ ಅರಬಗಟ್ಟೆ ಗ್ರಾಮದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಅವರು ಮಾತನಾಡಿದರು.

‘ಚುನಾವಣಾ ಪೂರ್ವದಲ್ಲಿ ಅರಬಗಟ್ಟೆ ಗ್ರಾಮದಲ್ಲಿ ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದರು. ಆಗ ತಡೆಗೋಡೆ ನಿರ್ಮಾಣ ಮಾಡಿಕೊಡುವುದಾಗಿ ಮಾತು ಕೊಟ್ಟಿದ್ದೆ. ಅದರಂತೆ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿ ಕೈಗೊಂಡಿದ್ದೇನೆ’ ಎಂದು ಹೇಳಿದರು.

ಗ್ರಾಮಸ್ಥರಾದ ದೊಡ್ಡೇಶಪ್ಪ, ಚಂದ್ರಪ್ಪ, ಜಗದೀಶ್, ಸಿದ್ದಪ್ಪ, ನಾಗರಾಜ್, ಸುರೇಶ್, ಉಮೇಶ್, ಕರಿಬಸಪ್ಪ, ಮಂಜುನಾಥ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.